ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಫೆ.04;

ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಮಧ್ಯಪ್ರವೇಶಿಸಬೇಕೆಂದು ಆಗ್ರಹಿಸಿ ಕರಾಳ ದಿನ ಆಚರಿಸಲಾಗುತ್ತಿದೆ.

ಮಹದಾಯಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿ ಕನ್ನಡಪರ ಸಂಘಟನೆಗಳು ಮತ್ತು ರೈತ ಹೋರಾಟಗಾರರು ಇಂದು ಕರಾಳ ದಿನ ಆಚರಿಸುತ್ತಿದ್ದು, ಇಲ್ಲಿನ ಫ್ರೀಡಂ ಪಾರ್ಕ್ ಎದುರು ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಹದಾಯಿ ವಿಚಾರದಲ್ಲಿ ಮೌನ ವಹಿಸಿರುವ ಪ್ರಧಾನಿ ಮೋದಿ ಭೇಟಿಯ ಈ ದಿನವನ್ನು ಕರಾಳ ದಿನವಾಗಿ ಆಚರಿಸಲಾಗುತ್ತಿದ್ದು, ಪ್ರತಿಭಟನಾಕಾರರು ಕಪ್ಪು ಪಟ್ಟಿ ಕಟ್ಟಿಕೊಂಡು ಧರಣಿ ನಡೆಸುತ್ತಿದ್ದಾರೆ.

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ಗಮನ ಸೆಳೆಯಲು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ  ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್, ಸಾಹಿತಿ ಚಂದ್ರಶೇಖರ ಪಾಟೀಲ್, ಸಾ.ರಾ.ಗೋವಿಂದ್ ಸೇರಿ ಹಲವು ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಸೂಕ್ತ ಕ್ರಮ ಕೈಗೊಂಡಿದ್ದಾರೆ.