ಕೆ.ಎನ್. ಪಿ.ವಾರ್ತೆ, ಬೆಂಗಳೂರು, ಫೆ.06;­

ಮಹದಾಯಿ ನದಿ ನೀರು ಹಂಚಿಕೆ ಸಂಬಂಧ ನ್ಯಾಯಾಧಿಕರಣ ವಿಚಾರಣೆಯು ಫೆ.8ಕ್ಕೆ ಮುಂದೂಡಲಾಗಿದೆ.

ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಯನ್ನು ಫೆ.13ಕ್ಕೆ ಮುಂದೂಡಿದ ನ್ಯಾಯಾಧಿಕರಣ ಉಳಿದ ಪ್ರಕರಣದ ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯನ್ನು ನ್ಯಾಯಮಂಡಳಿ ನಡೆಸಲು ಸಾಧ್ಯವಿಲ್ಲ. ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ನಡೆಸಬೇಕು ಎಂದು ರಾಜ್ಯ ಸರ್ಕಾರ ಹೇಳಿತ್ತು. ಹಾಗಾಗಿ ಗೋವಾ ಪರ ವಕೀಲರು ನ್ಯಾಯಾಂಗ ನಿಂದನೆ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿ ಹೇಳಿದ್ದಾರೆ.

ಆದರೆ ಗೋವಾ ವಕೀಲರು ನ್ಯಾಯಾಂಗ ನಿಂದನೆ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿ ಹೇಳಿದ್ದರು. ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆಯ ಸಾಧ್ಯಸಾಧ್ಯತೆಗಳ ಬಗ್ಗೆ ಫೆ.13ರೊಳಗೆ ತಿಳಿಸುವುದಾಗಿ ನ್ಯಾಯಮೂರ್ತಿ ಜೆ.ಎಸ್. ಪಾಂಚಾಲ್ ಹೇಳಿದ್ದಾರೆ. ಈ ನಿಟ್ಟಿನಲ್ಲಿ ವಿಚಾರಣೆಯನ್ನು ಫೆ.8ಕ್ಕೆ ಮುಂದೂಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.