ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.03;

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಫಲಾನುಭವಿಯಾಗಿರುವ ರಾಜ್ಯದ 31. 72 ಲಕ್ಷ ರೈತರಿಗೆ ತಲಾ 2 ಸಾವಿರ ರೂಪಾಯಿಗಳನ್ನು 10 ದಿನಗಳ ಒಳಗಾಗಿ ಅವರ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ವಿಭಾಗಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಈ ಕುರಿತು ಮುುಖ್ಯಮಂತ್ರಿ ಸೂಚನೆ ನೀಡಿದ್ದಾರೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ 43. 75 ಲಕ್ಷ ಫಲಾನುಭವಿಗಳ ಪಟ್ಟಿಯನ್ನು ಕಳುಹಿಸಲಾಗಿದೆ. ಈ ಪೈಕಿ ಅರ್ಹ 31.72 ಲಕ್ಷ ಫಲಾನುಭವಿ ರೈತರಿಗೆ ಕೇಂದ್ರಸರ್ಕಾರದಿಂದ 6 ಸಾವಿರ ಹಾಗೂ ರಾಜ್ಯ ಸರ್ಕಾರದಿಂದ 4 ಸಾವಿರ ರೂಪಾಯಿ ನೀಡುವುದರಿಂದ ರಾಜ್ಯದ ರೈತರಿಗೆ ವಾರ್ಷಿಕ 10 ಸಾವಿರ ರೂಪಾಯಿ ಸಿಗಲಿದೆ ಎಂದು ಹೇಳಿದರು.

ಈ ಫಲಾನುಭವಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಮೊದಲ ಕಂತಾಗಿ 2 ಸಾವಿರ ರೂಪಾಯಿ ಹಣವನ್ನು 10 ದಿನಗಳ ಒಳಗಾಗಿ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.