ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.12;

ಮಂಗಳೂರು, ದಾವಣಗೆರೆ ಮಹಾನಗರ ಪಾಲಿಕೆಗಳು ಸೇರಿ ರಾಜ್ಯದ ಒಟ್ಟು 14 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ಸಿದ್ಧತೆ ಮಾಡಿಕೊಂಡಿದ್ದು, 14 ನಗರ ಸ್ಥಳೀಯ ಸಂಸ್ಥೆಗಳ ಒಟ್ಟು 418 ವಾರ್ಡ್‌ಗಳಿಗೆ ಚುನಾವಣೆ ನಡೆಯುತ್ತಿದೆ. 9 ವಾರ್ಡ್‌ಗಳಲ್ಲಿ ಅವಿರೋಧ ಆಯ್ಕೆಯಾಗಿದ್ದು, ಅಂತಿಮವಾಗಿ 1,587 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

2 ಮಹಾನಗರ ಪಾಲಿಕೆ, 6 ನಗರಸಭೆ, 3 ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ಪ್ರಗತಿಯಲ್ಲಿದೆ. ಇಂದು ಬೆಳಗ್ಗಿನಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ನಡೆಯಲಿದೆ. ಒಟ್ಟು 13,04,614 ಮತದಾರರು ಮತ ಚಲಾಯಿಸುವ ಹಕ್ಕು ಪಡೆದಿದ್ದಾರೆ.

ಒಟ್ಟು 1,388 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಚುನಾವಣೆಯನ್ನು ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಈ ಚುನಾವಣೆಯಲ್ಲಿ ಮತದಾರರ ಎಡಗೈ ಉಂಗುರ ಬೆರಳಿಗೆ ಶಾಯಿ ಹಾಕಲಾಗುತ್ತಿದೆ. ಇದೇ ಮೊದಲ ಬಾರಿಗೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ’ನೋಟಾ’ಗೆ ಅವಕಾಶ ನೀಡಲಾಗಿದೆ.

ಒಂದೇ ಹೆಸರಿನ ಅಭ್ಯರ್ಥಿಗಳು ಸ್ಪರ್ಧಿಸುವ ಸಂದರ್ಭಗಳಲ್ಲಿ ಮತದಾರರಿಗೆ ಗೊಂದಲ ಉಂಟಾಗುವುದನ್ನು ತಪ್ಪಿಸಲು ಇವಿಎಂಗಳಲ್ಲಿ ಎಲ್ಲ ಅಭ್ಯರ್ಥಿಗಳ ಹೆಸರಿನ ಮುಂದೆ ಅವರ ಇತ್ತೀಚಿನ ಭಾವಚಿತ್ರ ಅಳವಡಿಸಲಾಗಿದೆ.

ಮತದಾನ ಹಾಗೂ ನ.14ರ ಮತ ಎಣಿಕೆ ದಿನದಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಸಂಬಂಧಿತ ಜಿಲ್ಲಾಡಳಿತಗಳಿಗೆ ಆಯೋಗ ಸೂಚಿಸಿದೆ.

ಮತದಾನ ಪ್ರಗತಿಯಲ್ಲಿರುವ ಕ್ಷೇತ್ರಗಳು :

ನಗರಸಭೆ : 

 • ಕನಕಪುರ
 • ಕೋಲಾರ
 • ಮುಳಬಾಗಿಲು
 • ಕೆ. ಜಿ. ಎಫ್
 • ಗೌರಿ ಬಿದನೂರು
 • ಚಿಂತಾಮಣಿ

ಪುರಸಭೆ :

 • ಬೀರೂರು
 • ಮಾಗಡಿ
 • ಕಂಪ್ಲಿ

ಪಟ್ಟಣ ಪಂಚಾಯಿತಿ :

 • ಕೂಡ್ಲಗಿ
 • ಕುಂದಗೋಳ
 • ಜೋಗ್-ಕಾರ್ಗಲ್

ಮಹಾನಗರ ಪಾಲಿಕೆ :

 • ದಾವಣಗೆರೆ
 • ಮಂಗಳೂರು

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.