ಕೆ.ಎನ್.ಪಿ.ವಾರ್ತೆ,ಚೆನ್ನೈ,ಡಿ.02;

ತಮಿಳುನಾಡು ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಮನೆಗಳು ಕುಸಿದು ಬಿದ್ದ ಪರಿಣಾಮ 10 ಮಂದಿ ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಒಟ್ಟು 15 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಭವಿಸಿದೆ.

ಇನ್ನೆರೆಡು ದಿನಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ತಿರುವಳ್ಳೂರ್, ವೆಲ್ಲೂರ್, ತಿರುವಣ್ಣಾಮಲೈ, ತೂತ್ತುಕುಡಿ, ರಾಮನಾಥಪುರಂ ಮತ್ತು ತಿರುನಲ್ವೇಲಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ಸೂಚನೆ ನೀಡಿದ್ದು, ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಭಾರೀ ಮಳೆಗೆ ಕೊಯಿಮತ್ತೂರು ಜಿಲ್ಲೆಯ ಮೆಟ್ಟುಪಾಳಯಂನ ನಡೂರ್ ಗ್ರಾಮದಲ್ಲಿ ಮೂರು ಮನೆಗಳು ಕುಸಿದು ಬಿದ್ದಿದ್ದು, ಪರಿಣಾಮ ಮಹಿಳೆಯರು, ಮಕ್ಕಳು ಸೇರಿ 15 ಮಂದಿ ಮೃತಪಟ್ಟಿದ್ದಾರೆ.

ಮೆಟ್ಟುಪಾಳಯಂನಲ್ಲಿರುವ ಕೊ ಅಪರೇಟಿವ್ ಸೊಸೈಟಿ ಬಳಿ ದೊಡ್ಡ ಕಾಂಪೌಂಡ್ ವೊಂದು ಮನೆಗಳ ಮೇಲೆ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಈ ನಡುವೆ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಂಕಷ್ಟದಲ್ಲಿರುವ ಜನರನ್ನು ರಕ್ಷಣೆ ಮಾಡಲು ಹರಸಾಹಸ ಪಡುತ್ತಿದ್ದಾರೆ.

ದುರ್ಘಟನೆಯಲ್ಲಿ ಸಾವಿಗೀಡಾದವರನ್ನು ಗುರು (45), ರಾಮನಾಥ್ (20) ಆನಂದ್ ಕುಮಾರ್ (40) ಹರಿ ಸುಧಾ (16), ಶಿವಕಾಮಿ (45), ಓವಿಯಮ್ಮಳ್ (50), ನಿತ್ಯ (300, ವೈದೇಹಿ (20), ತಿಲಗವಥಿ (50), ಅರುಕಾನಿ (55), ರುಕುಮಣಿ (40), ನಿವೇತಾ (18), ಚಿನ್ನಮ್ಮಾಳ್ (70) ಮತ್ತು ಅಕ್ಷಯ (7) ಲೋಗುರಾಮ್ (7) ಎಂದು ಗುರ್ತಿಸಲಾಗಿದೆ.

ಮೃತದೇಹಗಳನ್ನು ಮೆಟ್ಟುಪಾಳಯಂ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.