ಕೆ.ಎನ್.ಪಿ.ವಾರ್ತೆ,ನವದೆಹಲಿ,ಜೂ.01;

17ನೇ ಲೋಕಸಭೆ ಮೊದಲ ಅಧಿವೇಶನ ಜೂನ್ 17 ರಿಂದ ಆರಂಭವಾಗಿ ಜುಲೈ 26 ರವರೆಗೆ ನಡೆಯಲಿದ್ದು, ಜುಲೈ 5ರಂದು ಬಜೆಟ್ ಮಂಡನೆಯಾಗಲಿದೆ ಎಂದು ಶುಕ್ರವಾರ ಕೇಂದ್ರ ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಿನ್ನೆ ನಡೆದ ಮೊದಲ ಸಂಪುಟ ಸಭೆಯಲ್ಲಿ ಸಂಸತ್ ಅಧಿವೇಶನದ ದಿನಾಂಕವನ್ನು ಅಂತಿಮಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜೂನ್ 20ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದು, ಜುಲೈ 5ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ.

ಇನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಮನೇಕಾ ಗಾಂಧಿ ಅವರು ಜೂನ್ 17ರಂದು ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ಬಳಿಕ ಪೂರ್ಣಾವಧಿ ಸ್ಪೀಕರ್ ನೇಮಕಕ್ಕಾಗಿ ಜೂನ್ 19 ರಂದು ಸ್ಪೀಕರ್ ಚುನಾವಣೆ ನಡೆಯಲಿದೆ ಎನ್ನಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.