ಕೆ.ಎನ್.ಪಿ.ವಾರ್ತೆ,ನವದೆಹಲಿ,ಫೆ.01;

ಸ್ವಚ್ಛ ಭಾರತ ಯೋಜನೆಯಡಿ, 2 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡುವ ಗುರಿಯನ್ನು ಹೊಂದಲಾಗಿದೆ.

ಹಣಕಾಸು ಸಚಿವ ಅರುಣ್ ಜೇಟ್ಲಿ, 2018-19ನೇ ಸಾಲಿನ ಬಜೆಟ್‌ ಮಂಡನೆಯಲ್ಲಿ, ಸ್ವಚ್ಛ ಭಾರತ ಯೋಜನೆಯಡಿ 2 ಕೋಟಿ ಶೌಚಾಲಯಗಳನ್ನು ನಿರ್ಮಾಣ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಸ್ವಚ್ಛ ಭಾರತ ಯೋಜನೆಯು ಒಂದಾಗಿದ್ದು.

ಈ ಯೋಜನೆಯನ್ನು ವಿಸ್ತರಣೆ ಮಾಡಿ, ದೇಶಾದ್ಯಂತ 2 ಕೋಟಿ ಶೌಚಾಲಯವನ್ನು ನಿರ್ಮಾಣ ಮಾಡುವ ಗುರಿ ಇದೆ ಎಂದು ಅರುಣ್ ಜೇಟ್ಲಿ ಬಜೆಟ್‌ ಮಂಡನೆ ವೇಳೆ ತಿಳಿಸಿದ್ದಾರೆ. ಈ ಹಿಂದೆ, ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಜ್ ಘಾಟ್‌ನಲ್ಲಿ ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡಿದ್ದರು.