ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.19;

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2017ನೇ ಸಾಲಿನ ಯುವಬರಹಗಾರರ ಚೊಚ್ಚಲ ಕೃತಿಗಳನ್ನು ಪ್ರಕಟಿಸಲು, ಪ್ರೋತ್ಸಾಹಧನ ನೀಡುವ ಸಲುವಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿದಾರರು ಕನಿಷ್ಟ 18 ರಿಂದ 35 ವರ್ಷ ವಯೋಮಿತಿಯವರಾಗಿರಬೇಕು. ಸ್ವ-ವಿವರವುಳ್ಳ ಮನವಿಯೊಂದಿಗೆ ದೃಢೀಕೃತ ಎಸ್.ಎಸ್.ಎಲ್.ಸಿ. ಪ್ರಮಾಣ ಪತ್ರದ ಪ್ರತಿ ಅಥವಾ ಅಧಿಕೃತವಾದ, ದೃಢೀಕರಿಸಲ್ಪಟ್ಟ ಜನ್ಮದಾಖಲಾತಿ ಪ್ರಮಾಣ ಪತ್ರದ ಪ್ರತಿಯನ್ನು ಸಲ್ಲಿಸಬೇಕು. ಅಲ್ಲದೆ ಪ್ರಸ್ತುತ ಸಲ್ಲಿಸಲ್ಪಡುತ್ತಿರುವ ಕೃತಿಯು ತಮ್ಮ ಚೊಚ್ಚಲ ಕೃತಿಯಾಗಿದ್ದು, ಎಲ್ಲಿಯೂ ಪ್ರಕಟವಾಗಿಲ್ಲವೆಂದು ಸ್ವಯಂ ದೃಢೀಕರಣ ಪತ್ರ ನೀಡಬೇಕು.

ಆಯ್ಕೆಗಾಗಿ ಸಲ್ಲಿಸುವ ಹಸ್ತಪ್ರತಿಯು ಡಿ.ಟಿ.ಪಿ. ಮಾಡಿದ್ದು 1/8 ಡೆಮ್ಮಿ ಅಳತೆಯಲ್ಲಿ ಕನಿಷ್ಟ 60 ಪುಟಗಳಿರಬೇಕು. ಅನುವಾದ, ಪಠ್ಯಪುಸ್ತಕ ಹಾಗೂ ಬೇರಾವುದೇ ಪದವಿಗೆ ಸಿದ್ಧಪಡಿಸಿದ ಪ್ರಬಂಧಗಳನ್ನು ಹೊರತುಪಡಿಸಿ, ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಕನ್ನಡ ಸಾಹಿತ್ಯದ ಪ್ರಕಾರಗಳಿಗೆ ಸಂಬಂಧಿಸಿದಂತೆ ಹಸ್ತಪ್ರತಿ ಇರಬೇಕು.

ಕೃತಿಯ ಪಠ್ಯದಲ್ಲಿ ಯಾವುದೇ ಧರ್ಮ, ದೇವರು, ಜಾತಿ, ಕೋಮು, ವೃತ್ತಿ, ಸಮುದಾಯ, ಭಾಷೆ, ಆಚರಣೆ, ಪದ್ಧತಿ, ಇತ್ಯಾದಿ ಸಂಗತಿಗಳಿಗೆ ಸಂಬಂಧಿಸಿದಂತೆ ಹಾಗೂ ರಾಷ್ಟ್ರೀಯ ನಾಯಕರುಗಳ ಕುರಿತಂತೆ ನೇರವಾಗಿಯೇ ಆಗಲಿ ಅಥವಾ ಪರೋಕ್ಷವಾಗಿಯೇ ಆಗಲಿ ಮನನೋಯಿಸುವಂತಹ ವಿಷಯವಾಗಲಿ ಇರಬಾರದು. ಅಲ್ಲದೆ ರಾಷ್ಟ್ರೀಯ ಭಾವೈಕ್ಯತೆಗೆ ದಕ್ಕೆ ತರುವಂತಹ ವಿಷಯ / ಸಂಗತಿಗಳು ಪ್ರಸ್ತಾಪವಾಗಿರಬಾರದು. ಪ್ರಾಧಿಕಾರಕ್ಕೆ ಸಲ್ಲಿಸಲ್ಪಡುವ ಅರ್ಜಿಗಳನ್ನು/ ಹಸ್ತಪ್ರತಿಗಳನ್ನು ಹಿಂದಿರುಗಿಸಲಾಗುವುದಿಲ್ಲ. ಆದ ಕಾರಣ ಹಸ್ತಪ್ರತಿಯ / ಡಿ.ಟಿ.ಪಿ. ಪ್ರತಿಯ ಎರಡನೇ ಪ್ರತಿಯನ್ನು ಸಲ್ಲಿಸಲು ತಿಳಿಸಿದೆ.

ಅರ್ಜಿಗಳನ್ನು ಜೂ.30ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560 002 ಅವರಿಗೆ ಕಳುಹಿಸಿಕೊಡಲು ಕೋರಿದೆ.

ಹೆಚ್ಚಿನ ಮಾಹಿತಿಗಾಗಿ :

ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು 

ದೂರವಾಣಿ ಸಂಖ್ಯೆ : 080-22484516 / 22017704 

ಪ್ರಾಧಿಕಾರದ ವೈಬ್ ಸೈಟ್ : http://www.kannadapustakapradhikara.com

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

9513326661

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.