ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.23;

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ ಒಂದು ವಾರಗಳ ಹಿಂದಷ್ಟೇ ತಮಿಳುನಾಡಿನ ತಿರುವಲ್ಲೂರ್, ತೂತುಕುಡಿ ಹಾಗೂ ರಾಮನಾಥಪುರದಲ್ಲಿ ಭಾರಿ ಪ್ರಮಾಣದ ಮಳೆಯಾಗಿತ್ತು. ಕರ್ನಾಟಕದ ಕೆಲವೆಡೆ ಸಣ್ಣ ಪ್ರಮಾಣದಲ್ಲಿ ಮಳೆ ಸುರಿದಿತ್ತು.

ಕರ್ನಾಟಕದ ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ 48 ಗಂಟೆಯೊಳಗಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನುಳಿದಂತೆ ಹಲವೆಡೆ ಒಣಹವೆ ಮುಂದುವರೆಯಲಿದೆ.

ವಿಜಯಪುರದಲ್ಲಿ ಅತಿ ಕಡಿಮೆ ಉಷ್ಣಾಂಶ ಅಂದರೆ 14 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಉತ್ತರ ಕರ್ನಾಟ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ಬೆಂಗಳೂರಲ್ಲಿ ಮೋಡಕವಿದ ವಾತಾವರಣ

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ನಗರದಲ್ಲಿ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18.1 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ 18 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್‌ನಲ್ಲಿ ಗರಿಷ್ಠ 27.4 ಡಿಗ್ರಿ ಸೆಲ್ಸಿಯಸ್, ಕನಿಷ್ಠ 17.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.