ಕೆ.ಎನ್.ಪಿ.ವಾರ್ತೆ,ರಾಮನಗರ,ಜ.25;

ಬಿಡದಿ ಈಗಲ್‌ಟನ್‌ ರೆಸಾರ್ಟ್‌ನಲ್ಲಿ ವಿಜಯನಗರ ಶಾಸಕ ಆನಂದ್‌ ಸಿಂಗ್‌ ಮೇಲೆ ಹಲ್ಲೆ ನಡೆಸಿದ್ದ ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದಾರೆ. 

ಹಲ್ಲೆ ನಡೆಸಿದ ಪ್ರಕರಣ ಕುರಿತು ಪೊಲೀಸರು ಎಫ್‌ಐಆರ್‌ ದಾಖಲಿಸಿ ಪತ್ತೆ ಹಚ್ಚಲು ಮುಂದಾಗಿದ್ದರು. ಶಾಸಕ ಗಣೇಶ್‌ ಮುಂಬೈಗೆ ಪರಾರಿಯಾಗಿರುವ ಕುರಿತು ಮಾಹಿತಿ ಪಡೆದ ಪೊಲೀಸರು ಅಲ್ಲಿಗೆ ತೆರಳಿದರು.

ಮುಂಬೈ ಪೊಲೀಸರ ಸಹಾಯ ಪಡೆದು ಹೋಟೆಲ್‌ವೊಂದರ ಮೇಲೆ ದಾಳಿ ನಡೆಸಲಾಯಿತು. ಪೊಲೀಸರ ಆಗಮನದ ಸುದ್ದಿ ತಿಳಿಯುತ್ತಿದ್ದಂತೆ ಗಣೇಶ್‌ ಅಲ್ಲಿಂದ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದ್ದು, ಗಣೇಶ್‌ಗಾಗಿ ರಾಮನಗರ, ಮುಂಬೈ ಪೊಲೀಸರು ತೀವ್ರ ಶೋಧ ಮುಂದುವರೆದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.