ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.11;

ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರದ ಪತನಕ್ಕೆ ಕಾರಣವಾಗಿದ್ದ 17 ಅನರ್ಹ ಶಾಸಕರ ಅರ್ಜಿ ಕುರಿತು ಸುಪ್ರೀಂ ಕೋರ್ಟ್ ನವೆಂಬರ್ 13ರಂದು ತೀರ್ಪು ಪ್ರಕಟಿಸಲಿದೆ.

ಅನರ್ಹತೆ ಪ್ರಶ್ನಿಸಿ 17 ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ನ್ಯಾಯಮೂರ್ತಿ ಎನ್. ವಿ ರಮಣ ನೇತೃತ್ವದ ತ್ರಿಸದಸ್ಯ ಪೀಠ, 10 ದಿನಗಳ ಬಳಿಕ ತೀರ್ಪು ಪ್ರಕಟಿಸುವುದಾಗಿ ಹೇಳಿತ್ತು. ನಿನ್ನೆ ತೀರ್ಪು ಪ್ರಕಟಿಸುವ ದಿನಾಂಕ ನಿಗದಿ ಮಾಡಿದ್ದು, ಬಧವಾರ ಬೆಳಗ್ಗೆ ೧೦.೩೦ಕ್ಕೆ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ.

ಅನರ್ಹ ಶಾಸಕರ ಪ್ರಕರಣ ದ ಕುರಿತಾದ ತೀರ್ಪು ಪ್ರಕಟಣೆಗಾಗಿ ಸುಪ್ರೀಂ ಕೋರ್ಟ್‌‌ನ ಪಟ್ಟಿಯಲ್ಲಿ ಪ್ರಕರಣ ಸಂಖ್ಯೆ ಹಾಗೂ ವಾದಿ – ಪ್ರತಿವಾದಿಗಳ ಹೆಸರನ್ನು ಪಟ್ಟಿಯಲ್ಲಿ ಪ್ರಕಟಿಸಲಾಗಿದೆ.

ಅನರ್ಹ ಶಾಸಕರ ಪ್ರಕರಣದ ಕುರಿತು ಈಗಾಗಲೇ ವಾದ – ಪ್ರತಿವಾದ ಆಲಿಸಿದ ಕೋರ್ಟ್ ತೀರ್ಪು ಕಾಯ್ದಿರಿಸಿದ್ದು, ತೀರ್ಪಿಗಾಗಿ ಅನರ್ಹ ಶಾಸಕರು ಕಾಯುತ್ತಿದ್ದಾರೆ. 

ಸುಪ್ರೀಂ ತೀರ್ಪಿನ ಆಧಾರದ ಮೇಲೆ ಅನರ್ಹ ಶಾಸಕರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ಅವರು ಕಾಂಗ್ರೆಸ್ ನ 14 ಹಾಗೂ ಜೆಡಿಎಸ್‌ನ 3 ಜನ ಶಾಸಕರನ್ನು ಅನರ್ಹಗೊಳಿಸಿದ್ದರು. ಇದನ್ನು ಪ್ರಶ್ನಿಸಿ 17 ಜನ ಅನರ್ಹ ಶಾಸಕರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.