ಕೆ.ಎನ್.ಪಿ.ವಾರ್ತೆ,ಕೊಪ್ಪಳ,ಜ.02;

ಗಂಗಾವತಿ ತಾಲ್ಲೂಕಿನ ಆನೆಗೊಂದಿಯಲ್ಲಿ ಜನವರಿ 9 ಮತ್ತು 10ರಂದು ನಡೆಯಲಿರುವ ಆನೆಗೊಂದಿ ಉತ್ಸವ ಆಚರಣೆಗೆ ರಾಜ್ಯ ಸರ್ಕಾರ 1 ಕೋಟಿ ರೂಪಾಯಿ ಅನುದಾನ ನೀಡಿದೆ. ಅಲ್ಲದೆ ಉತ್ಸವಕ್ಕೆ ಸಿಎಸ್ ಆರ್ ನಡಿ ವಿವಿಧ ಖಾಸಗಿ ಸಂಸ್ಥೆಯಿಂದಲೂ ಫಂಡ್ ಸಂಗ್ರಹಿಸಲಾಗಿದೆ. ಒಟ್ಟು ಸುಮಾರು 2.10 ಕೋಟಿ ರೂ. ಅನುದಾನದಲ್ಲಿ ಉತ್ಸವ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಸುನೀಲ್ ಕುಮಾರ್ ಹೇಳಿದರು.

ಇಂದು ಕೊಪ್ಪಳದ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಉತ್ಸವದ ಕುರಿತು ಮಾಹಿತಿ ನೀಡಿದ ಅವರು, ಜನವರಿ 9ರಂದು ಸಿಎಂ ಯಡಿಯೂರಪ್ಪ ಅವರು ಆನೆಗೊಂದಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರು ಸಹ ಭಾಗವಹಿಸಲಿದ್ದಾರೆ ಎಂದರು.

ಗಾಯಕ ವಿಜಯಪ್ರಕಾಶ ಹಾಗೂ ಅರ್ಜುನ್ ಇಟಗಿ ಈ ಬಾರಿ ಸಂಗೀತದ ರಸದೌತಣ ನೀಡಲಿದ್ದಾರೆ. ಉತ್ಸವದ ವೇಳೆ ವಿವಿಧ ಗ್ರಾಮೀಣ ಕ್ರೀಡಾಕೂಟ ಆಯೋಜಿಸಲಾಗಿದೆ.

ಉತ್ಸವಕ್ಕೆ ಬರುವ ಪ್ರವಾಸಿಗರಿಗೆ ಉಚಿತ ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಗಂಗಾವತಿ ಮತ್ತು ಕೊಪ್ಪಳದಿಂದ ತಲಾ 5 ಬಸ್ ಕಾರ್ಯಾಚರಣೆ ಮಾಡಲಿವೆ. ಆನೆಗೊಂದಿಯಲ್ಲೂ ಸ್ಥಳೀಯವಾಗಿ ಓಡಾಡಲು ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ. ಒಟ್ಟು 14 ಬಸ್ ಉಚಿತ ಕಾರ್ಯಾಚರಣೆ ನಡೆಸಲಿವೆ ಎಂದು ಮಾಹಿತಿ ನೀಡಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.