ಕೆ.ಎನ್.ಪಿ.ವಾರ್ತೆ,ಕಲಬುರ್ಗಿ,ಜೂ.02;

ಜೇವರ್ಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದ ಬಳಿ ಎರಡು ಸರ್ಕಾರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ಕು ಜನ ಮೃತಪಟ್ಟಿದ್ದಾರೆ.

ದಾವಣಗೆರೆಯಿಂದ ಕಲಬುರಗಿಗೆ ಬರುತ್ತಿದ್ದ ಬಸ್ ಹಾಗೂ ಜೇವರ್ಗಿಯಿಂದ ಯಾದಗಿರಿ ಜಿಲ್ಲೆ ಶಹಾಪುರದತ್ತ ಹೋಗುತ್ತಿದ್ದ ಸರ್ಕಾರಿ ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಮೂವರು ಶಿಕ್ಷಕಿಯರು ಸೇರಿ ನಾಲ್ವರು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.

ಜೇವರ್ಗಿ ತಾಲ್ಲೂಕು ಚಿಗರತಿಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿಯರಾದ ಆಯೇಷಾ ಸಿದ್ದಿಕಿ (35), ಫರೀನ್ ಬೇಗಂ (40), ಯಾಳವಾರ ಸರ್ಕಾರಿ ಶಾಲೆಯ ಸಹರಾ ಕಲತೂನ್ (30), ಬಸ್ ಚಾಲಕ ರುಕ್ಕಪ್ಪ ಯಶವಂತರಾಯ (55) ಮೃತ ದುರ್ಧೈವಿಗಳು. ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಜೇವರ್ಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

9513326661

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.