ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.09;

ಮಲ್ಲೇಶ್ವರದ ಮಂತ್ರಿ ಗ್ರೀನ್ಸ್‌ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್‌ನ ವಿ.ಅರುಣ್‌ ಕೋಟ್ಯಾನ್‌ (47) ಹಾಗೂ ಕೋಲ್ಕೊತ್ತಾ ಮೂಲದ ಕರಣ್‌ ಶಾ (20) ಬಂಧಿತರು. ಇವರಿಂದ 10 ಸಾವಿರ ರೂ. ನಗದು, 2 ಮೊಬೈಲ್‌ ಫೋನ್‌ ಜಪ್ತಿ ಮಾಡಲಾಗಿದೆ.

ಹೊರ ರಾಜ್ಯದ ಯುವತಿಯರನ್ನು ಮಾನವ ಕಳ್ಳಸಾಗಣೆ ಮಾಡಿಕೊಂಡು ಬಂದು ಮಂತ್ರಿ ಗ್ರೀನ್‌ನ 14ನೇ ಮಹಡಿಯ ಫ್ಲ್ಯಾಟ್‌ವೊಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಕುರಿತು ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.