ಕೆ.ಎನ್.ಪಿ.ವಾರ್ತೆ,ಹೈದರಾಬಾದ್,ಡಿ.06;

ಹೈದರಾಬಾದ್ ಪ್ರಿಯಾಂಕಾ ರೆಡ್ಡಿ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳನ್ನು ಬೇಟೆಯಾಡಿದ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಪ್ರಿಯಾಂಕಾ ರೆಡ್ಡಿ ಹತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ನಾಲ್ವರು ಆರೋಪಿಗಳನ್ನು ಇಂದು ಬೆಳಿಗ್ಗೆ ಹೈದರಾಬಾದ್ ಪೊಲೀಸರು ಎನ್ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ.

ಆರೋಪಿಗಳನ್ನು ಪೊಲೀಸರು ಎನ್’ಕೌಂಟರ್ ಮಾಡಿದ್ದಾರೆಂಬ ಸುದ್ದಿ ತಿಳಿಯುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಶ್ಲಾಘನೆಗಳು ವ್ಯಕ್ತವಾಗುತ್ತಿವೆ.

ಪ್ರಮುಖವಾಗಿ ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ ಕುರಿತು ಜನರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ವಿಶ್ವನಾಥ್ ಸಜ್ಜನರ್ ಅವರು, ಎನ್’ಕೌಂಟರ್ ನಡೆಸಿದ್ದ ಪೊಲೀಸ್ ತಂಡ ನೇತೃತ್ವ ವಹಿಸಿದ್ದರು.

ಎನ್ ಕೌಂಟರ್ ಸ್ಪೆಷಲಿಸ್ಟ್ ಎಂದೇ ಪ್ರಸಿದ್ದರಾಗಿರುವ ವಿಶ್ವನಾಥ್ ಈ ಹಿಂದೆ ಹಲವು ಆರೋಪಿಗಳನ್ನು ಎನ್ ಕೌಂಟರ್ ಮಾಡಿದ್ದಾರೆ. ಪ್ರಸ್ತುತ ವಿಶ್ವನಾಥ್ ಅವರು ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಪ್ರವಾಸಿ ತಾಣವಾದ ಎನ್ ಕೌಂಟರ್ ಸ್ಥಳ!

ಕಾಮುಕ ರಾಕ್ಷಸರನ್ನು ಪೊಲೀಸರು ಬೇಟೆಯಾಡಿದ ಸ್ಥಳ ಇದೀಗ ದಿಢೀರ್ ಪ್ರವಾಸಿ ತಾಣವಾಗಿ ಮಾರ್ಪಟ್ಟಿದ್ದು, ಸಾವಿರಾರು ಮಂದಿ ತಂಡೋಪತಂಡವಾಗಿ ದೌಡಾಯಿಸುತ್ತಿದ್ದಾರೆ.

‘ಹತ್ಯಾಚಾರ’ ಪ್ರಕರಣ

ಬಸ್, ಕಾರು, ಬೈಕ್ ಹೀಗೆ ಸಿಕ್ಕ ಸಿಕ್ಕ ವಾಹನಗಳಲ್ಲಿ ಘಟನಾ ಸ್ಥಳಕ್ಕೆ ಜನರು ದೌಡಾಯಿಸುತ್ತಿದ್ದು, ಒಂದೆಡೆ ಪ್ರಿಯಾಂಕಾ ರೆಡ್ಡಿಯನ್ನು ಸುಟ್ಟುಹಾಕಿದ ಸ್ಥಳಕ್ಕೆ ಹೂಗಳನ್ನು ಅರ್ಪಿಸಿ ಬಳಿಕ ಎನ್ ಕೌಂಟರ್ ನಡೆದ ಸ್ಥಳಕ್ಕೆ ತೆರಳುತ್ತಿದ್ದಾರೆ.

ಇನ್ನು ಅದೇ ಮಾರ್ಗದಲ್ಲಿ ಚಲಿಸುತ್ತಿರುವ ವಾಹನಗಳಲ್ಲಿನ ಪ್ರಯಾಣಿಕರು ಅಲ್ಲಿಯೇ ಇದ್ದ ಪೊಲೀಸರಿಗೆ ಜೋರಾಗಿ ಕೂಗುತ್ತಾ ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ. ಇನ್ನು ಬಸ್ಸಿನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಯುವತಿಯರೂ ಕೂಡ ತೆಲಂಗಾಣ ಪೊಲೀಸರ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದ್ದು, ಥ್ಯಾಂಕ್ಯೂ ತೆಲಂಗಾಣ ಪೊಲೀಸ್ ಎಂದು ಕೂಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.