ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.02;

ಬೆಂಗಳೂರಿನ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಡಿ.05ರಂದು ನಡೆಯಲಿರುವ ಉಪ ಚುನಾವಣೆ ಗೆ ಎಲ್ಲಾ ಅಗತ್ಯ ಭದ್ರತೆ ಒದಗಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆ ಸಂಜೆ 6 ಗಂಟೆಯಿಂದ ಡಿಸೆಂಬರ್ 5ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.

ಕೆ.ಆರ್‌.ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ ಕ್ಷೇತ್ರಗಳಲ್ಲಿ ನಡೆಯಲಿರುವ ಉಪ ಚುನಾವಣೆ ಗೆ ಭಾರಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ.

ನಗರದ 28 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಸುಗಮ ಮತ್ತು ಶಾಂತಿಯುತ ಮತದಾನಕ್ಕೆ ಎಲ್ಲಾ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಚುನಾವಣಾ ಭದ್ರತೆಗಾಗಿ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರು, 7 ಮಂದಿ ಡಿಸಿಪಿಗಳು, 14 ಮಂದಿ ಎಸಿಪಿಗಳು, 30 ಪೊಲೀಸ್ ಇನ್ಸ್‌ ಪೆಕ್ಟರ್ ಗಳು, 68 ಪಿಎಸ್‌ಐಗಳು, 160 ಎಎಸ್‌ಐ ಗಳು 1666 ಮುಖ್ಯ ಪೇದೆ, ಪೇದೆಗಳನ್ನು ನಿಯೋಜಿಸಲಾಗಿದೆ ಎಂದು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.