ಕೆ.ಎನ್.ಪಿ.ವಾರ್ತೆ,ಸಾಗರ,ಜು.28;

ಅಸ್ಥಿರ ಸರ್ಕಾರ ರಚನೆಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ ಎಂದು ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಪ್ರಚಾರ ಸಮಿತಿ ಅಧ್ಯಕ್ಷ ವೈಎಸ್ ವಿ ದತ್ತಾ ಸಲಹೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಥಿರ ಸರ್ಕಾರ ರಚನೆಗಿಂತ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ತೆರೆಳುವುದೇ ಹೆಚ್ಚು ಸೂಕ್ತ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಾಲಕಾಲಕ್ಕೆ ಶಾಸಕರ ಸಮಸ್ಯೆಗಳನ್ನು ಆಲಿಸಿ ಸೂಕ್ತ ಪರಿಹಾರಗಳನ್ನು ಸೂಚಿಸದಿರುವುದೇ ಸಮ್ಮಿಶ್ರ ಸರ್ಕಾರ ಪತನಗೊಳ್ಳಲು ಕಾರಣವಾಗಿದೆ ಎಂದು ಹೇಳಿದ್ದಾರೆ.

ಮುಂಬೈಗೆ ತೆರಳಿದ್ದ ಶಾಸಕರನ್ನು ಪ್ರಳಯವಾದರೂ ಮತ್ತೆ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲವೆಂದು ಸಿದ್ದರಾಮಯ್ಯ ಕಡ್ಡಿ ತುಂಡು ಮಾಡಿದಂತೆ ಸದನದಲ್ಲಿಯೇ ಘೋಷಣೆ ಮಾಡಿರುವುದು ಮೈತ್ರಿ ಸರ್ಕಾರಕ್ಕೆ ಮತ್ತಷ್ಟು ಮುಳುವಾಯಿತು ಎಂದು ಅವರು ಹೇಳಿದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.