ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.10;

ವಿಧಾನಸಭಾ ಅಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಅವರು ಅತೃಪ್ತ ಶಾಸಕರ ರಾಜೀನಾಮೆಯನ್ನು ಸ್ವೀಕರಿಸಬೇಕು ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಶನಿವಾರದಂದು ಕಾಂಗ್ರೆಸ್- ಜೆಡಿಎಸ್ ನ ಅತೃಪ್ತ ಶಾಸಕರು ರಾಜೀನಾಮೆ ಸಲ್ಲಿಸಿದ್ದರು. ಮಂಗಳವಾರದಂದು ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ್ದ ಸ್ಪೀಕರ್, ಐವರ ರಾಜೀನಾಮೆ ಪತ್ರ ಕ್ರಮವಾಗಿದೆ. ಉಳಿದ ಎಂಟು ಶಾಸಕರ ರಾಜೀನಾಮೆ ಕ್ರಮಬದ್ಧವಾಗಿಲ್ಲ. ಆದ್ದರಿಂದ ಸ್ವತಃ ಅವರೇ ಬಂದು ರಾಜೀನಾಮೆ ಸಲ್ಲಿಸಬೇಕು ಎಂದು ಹೇಳಿದ್ದರು.

ಅತೃಪ್ತ ಶಾಸಕರ ರಾಜೀನಾಮೆ ಸ್ವೀಕರಿಸಲು ವಿಧಾನಸಭಾ ಅಧ್ಯಕ್ಷರು ತಡ ಮಾಡುತ್ತಿರುವುದು ಸರಿಯಲ್ಲ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಲು ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ಭೇಟಿ ಮಾಡುವ ಬಗ್ಗೆ ಬಿಜೆಪಿಯಿಂದ ಚಿಂತನೆ ನಡೆದಿದೆ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.