ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.22;

ಬೆಂಗಳೂರು ನಗರದ ರಸ್ತೆಯೊಂದಕ್ಕೆ ಡಾ.ಶಿವಕುಮಾರ ಸ್ವಾಮೀಜಿ ಹೆಸರಿಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಸ್ವಾಮೀಜಿಗಳ ಹೆಸರಿಡಲು ಒಪ್ಪಿಗೆ ಕೋರಿ ಬಿಬಿಎಂಪಿ ಮನವಿ ಸಲ್ಲಿಕೆ ಮಾಡಿತ್ತು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಗಂಗಾಬಿಕೆ ಅವರು ಸರ್ಕಾರ ಒಪ್ಪಿಗೆ ನೀಡಿರುವುದನ್ನು ಖಚಿತಪಡಿಸಿದ್ದಾರೆ. “ನಮ್ಮ ದೀರ್ಘ ಪ್ರಯತ್ನ ಸಫಲವಾಗಿದ್ದು, ಸರ್ಕಾರದ ಆದೇಶವಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ” ಎಂದು ಹೇಳಿದ್ದಾರೆ.

ಬಿಬಿಎಂಪಿ ವ್ಯಾಪ್ತಿಗೆ ಬರುವ ಗೊರಗುಂಟೇಪಾಳ್ಯದಿಂದ ಕೆನ್ನಾಮೆಟಲ್ ಕಾರ್ಖಾನೆವರೆಗಿನ ಮೇಲುಸೇತುವೆಗೆ ಮತ್ತು ಯಶವಂತಪುರ ವೃತ್ತದಿಂದ ಕೆನ್ನಾಮೆಟಲ್ ಕಾರ್ಖಾನೆವರೆಗಿನ ರಸ್ತೆಗೆ ಶಿವಕುಮಾರ ಸ್ವಾಮೀಜಿ ರಸ್ತೆ ಎಂದು ನಾಮಕರಣ ಮಾಡಲು ಬಿಬಿಎಂಪಿ ಪ್ರಸ್ತಾವನೆ ಸಲ್ಲಿಸಿತ್ತು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.