ಕೆ.ಎನ್.ಪಿ.ವಾರ್ತೆ,ಉಡುಪಿ,ಆ.31;

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಬೈಂದೂರು ‌ತಾಲೂಕಿನ ನಾಯ್ಕನಕಟ್ಟೆ ಎಂಬಲ್ಲಿ ನಡೆದಿದೆ.

ಭಟ್ಕಳ ಮೂಲದ 48 ವರ್ಷದ ನೂರುಲ್ ಅಮೀನ್ ಮೃತ ದುರ್ದೈವಿ. ಇವರು ಮಂಗಳೂರಿನಿಂದ ಭಟ್ಕಳಕ್ಕೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ, ಡಿವೈಡರ್ ಮೇಲೇರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಇನ್ನೊಂದು ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.