ಕೆ.ಎನ್.ಪಿ.ವಾರ್ತೆ,ಹಾಸನ,ಆ.14;

ಬೈಕ್‍ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಮೃತಪಟ್ಟಿರುವ ಘಟನೆ ಹೊಳೆನರಸೀಪುರ ತಾಲೂಕಿನ ಸಿಗರನಹಳ್ಳಿ ಬಳಿ ಇಂದು ನಡೆದಿದೆ.

ಸಿಗರನಹಳ್ಳಿ ನಿವಾಸಿಗಳಾದ ಉಮೇಶ್(23) ಹಾಗೂ ಹರೀಶ್(22) ಮೃತ ದುರ್ದೈವಿಗಳು. ಹಾಸನ ನಗರದಿಂದ ಬೈಕ್ ನಲ್ಲಿ ಹೊಳೆನರಸೀಪುರ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಕಾರು ಚಾಲಕನಿಗೂ ಗಂಭೀರವಾಗಿ ಗಾಯವಾಗಿದೆ.

ಸುದ್ದಿ ತಿಳಿದ ತಕ್ಷಣ ಹೊಳೆನರಸೀಪುರ ನಗರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.