ಕೆ.ಎನ್.ಪಿ.ವಾರ್ತೆ,ಚೆನ್ನೈ,ಅ.29;

ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಪುಟ್ಟ ಮಗುವನ್ನು ರಕ್ಷಿಸುವ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬೋರ್ ವೆಲ್ ನಲ್ಲಿಯೇ ಮಗು ಸಾವನ್ನಪ್ಪಿ, ದೇಹ ಕೊಳೆತು ಛಿದ್ರವಾಗಿದೆ ಎಂದು ಜಿಲ್ಲಾಧಿಕಾರಿ ಜೆ.ರಾಧಾಕೃಷ್ಣ ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನ ತಿರುಚಿನಾಪಳ್ಳಿ ಸಮೀಪ ಶುಕ್ರವಾರ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಸುಜೀತ್ ವಿಲ್ಸನ್ ಸಾವನ್ನಪ್ಪಿದ್ದು, ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜೆ ರಾಧಾಕೃಷ್ಣ ಅವರು, ಮಗುವಿನ ರಕ್ಷಣೆಗೆ ಸರ್ಕಾರ ಮತ್ತು ಜಿಲ್ಲಾಡಳಿತ ಅವಿರತ ಶ್ರಮವಹಿಸಿತ್ತು. ಆದರೆ ನಮ್ಮ ಪ್ರಯತ್ನಗಳು ವಿಫಲವಾಗಿದ್ದು, ಬೋರ್ ವೆಲ್ ನಲ್ಲಿಯೇ ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ. ಅಲ್ಲದೆ ಆತನ ದೇಹ ಕೊಳೆತಿದ್ದು, ದೇಹ ಛಿದ್ರವಾಗಿದೆ ಎಂದು ಎಂದು ಹೇಳಿದ್ದಾರೆ.

ಬಾಲಕ ಸುಜಿತ್ ಶವವನ್ನು ಆತನ ಹುಟ್ಟೂರು ಪುಡೂರ್ ಗೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಆತನ ಕುಟುಂಬಸ್ಥರು ಅಂತಿಮ ಸಂಸ್ಕಾರ ನೆರವೇರಿಸಲಿದ್ದಾರೆ.

ನಡುಕಟ್ಟುಪಟ್ಟಿ ಸಮೀಪ ಮನೆಯಲ್ಲಿ ಆಡುತ್ತಿದ್ದ ಮಗು ಶುಕ್ರವಾರ ಸಂಜೆ ಕೊಳವೆಬಾವಿಗೆ ಬಿದ್ದಿತ್ತು. ಮಗುವಿನ ರಕ್ಷಣೆಗೆ ಅಗ್ಮಿ ಶಾಮಕದಳ, ಪೊಲೀಸ್ ಇಲಾಖೆ, ವಿಪತ್ತು ನಿರ್ವಹಣಾ ಸಿಬ್ಬಂದಿಗಳು ಸೇರಿದಂತೆ ಹಲವು ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದರು. ಬಾಲಕ ಸುಜಿತ್ ಸುರಕ್ಷಿತವಾಗಿ ಹೊರಬರಲಿ ಎಂದು ಲಕ್ಷಾಂತರ ಪ್ರಾರ್ಥಿಸಿದ್ದರು.

ಕೆ.ಎನ್.ಪಿ.ಯ ಸಮಸ್ತ ಓದುಗ ಬಳಗಕ್ಕೆ ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು…

ಬೆಳಕಿನ ಹಬ್ಬ ನಿಮಗೆ ಸುಖ, ಸಂಪತ್ತು, ನೆಮ್ಮದಿ ಕರುಣಿಸಲಿ. ನಿಮ್ಮ ಜೀವನ ಸಮೃದ್ಧಿಯ ಹಾದಿಯಲ್ಲಿ ಸಾಗಲಿ….. ದೀಪದಂತೆ ನಿಮ್ಮ ಬದುಕೂ ಪ್ರಕಾಶಮಾನವಾಗಿರಲಿ. ನಿಮ್ಮ ಮತ್ತು ನಿಮ್ಮ ಪ್ರೀತಿಪಾತ್ರರ ಜೀವನ ಉಜ್ವಲವಾಗಲಿ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.