ಕೆ.ಎನ್.ಪಿ.ವಾರ್ತೆ,ಕೋಲ್ಕತಾ,ನ.11;

ಪಶ್ಚಿಮ ಬಂಗಾಳದಲ್ಲಿ ತೀವ್ರ ಭೀತಿ ಸೃಷ್ಟಿಸಿರುವ ಬುಲ್ ಬುಲ್ ಚಂಡಮಾರುತ ದ ಅಬ್ಬರಕ್ಕೆ 22ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಶನಿವಾರ ಮಧ್ಯರಾತ್ರಿ ಬಂಗಾಳದ ಸಾಗಾರ ದ್ವೀಪಗಳು ಮತ್ತು ಬಾಂಗ್ಲಾದೇಶದ ಖೇಪುಪುರ ಕರಾವಳಿ ಪ್ರಾಂತ್ಯಕ್ಕೆ ಬುಲ್ ಬುಲ್ ಚಂಡಮಾರುತ ಅಪ್ಪಳಿಸಿದ್ದು, ಚಂಡಮಾರುತದ ಅಬ್ಬರಕ್ಕೆ ಈ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ. ಇನ್ನು ಚಂಡಮಾರುತ ದ ಅಬ್ಬರಕ್ಕೆ ಈ ವರೆಗೂ ಬಂಗಾಳದಲ್ಲಿ 22ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿ ಅನ್ವಯ ಪ್ರಸ್ತುತ ಅಪ್ಪಳಿಸಿರುವ ಬುಲ್ ಬುಲ್ ಚಂಡಮಾರುತ ಪ್ರತೀ ಗಂಟೆಗೆ 120 ರಿಂದ 135 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹೇಳಿದೆ.

ಇನ್ನು ಪಶ್ಚಿಮ ಬಂಗಾಳದ ಮಿಡ್ನಾಪುರ ಮತ್ತು ದಕ್ಷಿಣ ಮತ್ತು ಉತ್ತರ 24 ಪರಗಣ ಜಿಲ್ಲೆಗಳು ಚಂಡಮಾರುತ ದ ಅಬ್ಬರಕ್ಕೆ ತತ್ತರಿಸಿ ಹೋಗಿದ್ದು, ನೂರಾರು ಮರಗಳು ಧರೆಗುರುಳಿವೆ. ರಾಷ್ಟ್ರೀಯ ವಿಪತ್ತು ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

2.73 ಲಕ್ಷ ಮಂದಿ ನಿರಾಶ್ರಿತರು :

ಇನ್ನು ಬುಲ್ ಬುಲ್ ಚಂಡಮಾರುತದಿಂದಾಗಿ ಇಲ್ಲಿನ ನೂರಾರು ಗ್ರಾಮಗಳಲ್ಲಿ ತೊಂದರೆಯಾಗಿದ್ದು, ಸಾವಿರಾರು ಮನೆಗಳು ಕುಸಿದಿವೆ. ಪರಿಣಾಮ ಬಂಗಾಳದ ಸುಮಾರು 2.73 ಲಕ್ಷ ಮಂದಿ ನಿರಾಶ್ರಿತರಾಗಿದ್ದಾರೆ. 1.78 ಲಕ್ಷ ಮಂದಿ ನಿರಾಶ್ರಿತ ಶಿಬಿರಗಳಿಗೆ ಸ್ಥಳಾಂತರಗೊಂಡಿದ್ದಾರೆ. ಕನಿಷ್ಠ 2,473 ಮನೆಗಳು ದ್ವಂಸಗೊಂಡಿದ್ದು, 26,000 ಮನೆಗಳು ಭಾಗಶಃ ಹಾನಿಗೊಳಗಾಗಿವೆ.

ಬಂಗಾಳದಲ್ಲಿ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದ್ದು, 10 ಸಾವಿರಕ್ಕೂ ಅಧಿಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.

ಒರಿಸ್ಸಾ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಮುನ್ನೆಚ್ಚರಿಕಾ ಕ್ರಮವಾಗಿ ಹೈ ಅಲರ್ಟ್​ ಘೋಷಣೆ ಮಾಡಿವೆ.

ಇನ್ನೂ 3 ದಿನಗಳ ಕಾಲ ಚಂಡಮಾರುತದ ಅಬ್ಬರ ಇರುತ್ತದೆ ಎನ್ನಲಾಗಿದ್ದು, ಅಧಿಕ ಮಳೆಯಾಗಲಿದೆ.

ಚಂಡಮಾರುತದಿಂದ ಹಾನಿ ಸಂಭವಿಸಬಹುದೆಂದು ರಾಜ್ಯ ಸರ್ಕಾರಗಳು ಈಗಾಗಲೇ ಮುನ್ನೆಚ್ಚರಿಕೆ ವಹಿಸಿವೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪುರಿ, ಜಗತ್​​ಸಿಂಗ್​ಪುರ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.