ಕೆ.ಎನ್.ಪಿ.ವಾರ್ತೆ,ಹಾವೇರಿ,ಆ.15;

ಬ್ಯಾಡಗಿ ತಾಲ್ಲೂಕಿನ ಚತ್ರಿ ಗ್ರಾಮದಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಂದು ನಡೆದಿದೆ.

ಮೃತರನ್ನು ದಾವಣಗೆರೆ ಮೂಲದ ಆನಂದ್ ಕುಮಾರ್, ಕೊಟ್ರೇಶ್ ಸಿದ್ದರಾಮಪ್ಪ ಮತ್ತು ಸತೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮೂವರು ದಾವಣಗೆರೆಯಿಂದ ಗೋವಾದತ್ತ ಹೊರಟಿದ್ದರು. ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಎನ್​ಎಚ್​ 4 ರಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಉರುಳಿಬಿದ್ದಿದೆ ಎನ್ನಲಾಗಿದೆ. ಈ ಸಂಬಂಧ ಬ್ಯಾಡಗಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.