ಕೆ.ಎನ್.ಪಿ.ವಾರ್ತೆ,ಮುಂಡರಗಿ,ಆ.21;

ಮುಖ್ಯಮಂತ್ರಿ ಯಡಿಯೂರಪ್ಪ ಸಚಿವ ಸಂಪುಟದಲ್ಲಿ ನರಗುಂದ ಕ್ಷೇತ್ರದ ಶಾಸಕ ಸಿ.ಸಿ.ಪಾಟೀಲ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನೆಲೆಯಲ್ಲಿ ಸಿ.ಸಿ.ಪಾಟೀಲರ ಪರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವನ್ನು ಆಚರಿಸಿದರು. 

ಇಲ್ಲಿನ ಶಿರೋಳ ಸರ್ಕಲ್‍ನಲ್ಲಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪರಸ್ಪರ ಸಿಹಿ ಹಂಚಿ ಜೈಘೋಷಗಳನ್ನು ಕೂಗುತ್ತಾ ಸಂಭ್ರಮಾಚರಿಸಿದರು. ಈ ವೇಳೆ ರೈತ ಮೋರ್ಚಾ ಅಧ್ಯಕ್ಷ ಶಿವನಗೌಡ ಗೌಡ್ರು, ದೇವಪಪ್ಪ ಇಟಿಗಿ, ಪ್ರಹ್ಲಾದ ಹೊಸಮನಿ, ಪವನ ಮೇಟಿ, ನಾಗರಾಜಮುರಡಿ, ಯಲ್ಲಪ್ಪ ಗುಡೊಗೇರಿ, ದೇವಪ್ಪ ಕಲಕೇರಿ, ಸುರೇಶ ಡೊಳ್ಳಿನ, ಕೆಂಚನಗೌಡ ಗೌಡ್ರ, ಹನುಮಂತಗೌಡ್ರ, ಶಿವರಾಜ ಅಳವಂಡಿ ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ : ಕೋಗಳಿ ಶೇಖರ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.