ಕೆ.ಎನ್.ಪಿ.ವಾರ್ತೆ,ಚಿಕ್ಕೋಡಿ,ನ.07;

ಶಾಲಾ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೆ ಸಾವಿಗೀಡಾದ ಘಟನೆ ಚಿಕ್ಕೋಡಿ ಪಟ್ಟಣದ ಮೆಹಬೂಬ ನಗರದ ಬಳಿ ನಡೆದಿದೆ.

ಶಾಲಾ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಚಿಕ್ಕೋಡಿ ಪಟ್ಟಣದ ಸೇಂಟ್ ಫ್ರಾನ್ಸಿಸ್ ಶಾಲೆಗೆ ಸೇರಿದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 5 ವರ್ಷದ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ.

ತಾಯಿ ಹಾಗೂ ಸಹೋದರ ಮಾವನೊಂದಿಗೆ ಬೈಕ್ ಮೇಲೆ ಬಾಲಕಿ ಹೊರಟಿದ್ದಳು. ರಾಜನಂದಿನಿ ತಾಯಿ ಹಾಗೂ ಮಾವನಿಗೂ ಸಹ ಸಣ್ಣ ಪುಟ್ಟ ಗಾಯಗಳಾಗಿವೆ. ತಿರುವಿನಲ್ಲಿ ಅತಿ ವೇಗದ ಬಸ್ ಚಲಾವಣೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.