ಕೆ.ಎನ್.ಪಿ.ವಾರ್ತೆ,ಹಾಸನ,ಆ.19;

ರೌಡಿಶೀಟರ್ ಒಬ್ಬನನ್ನು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಇಲ್ಲಿನ ಚನ್ನರಾಯಪಟ್ಟಣದಲ್ಲಿ ನಡೆದಿದೆ.

ಹಡೆನಹಳ್ಳಿ ಹರೀಶ ಹತ್ಯೆಯಾದ ರೌಡಿಶೀಟರ್. ಧನಲಕ್ಷ್ಮಿ ಥಿಯೇಟರ್ ಹತ್ತಿರದ ಬಾರ್ ನಲ್ಲಿ ಕುಡಿದು ಹೊರ ಬಂದಾಗ ಈತನನ್ನು ದುಷ್ಕರ್ಮಿಗಳು ಚೂರಿಯಿಂದ ಇರಿದು ಹತ್ಯೆ ಮಾಡಿದ್ದಾರೆ.

ಕಳೆದ 2 ವರ್ಷಗಳ ಹಿಂದೆ ಶಿವ ಎಂಬುವನನ್ನು ಕೊಲೆ ಮಾಡಿದ್ದ ಆರೋಪಿ ಹರೀಶ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎಂದು ಜಿಲ್ಲಾ ಪೋಲಿಸ ವರಿಷ್ಠಾಧಿಕಾರಿ ಡಾ. ಎ.ಎನ್.ಪ್ರಕಾಶ ಗೌಡ ತಿಳಿಸಿದ್ದಾರೆ.

ಸುದ್ದಿ ತಿಳಿದ ಚನ್ನರಾಯಪಟ್ಟಣ ನಗರ ಠಾಣೆ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದು ಮೃತದೇಹವನ್ನು ಶವ ಪರೀಕ್ಷೆಗೆ ಸಕಾ೯ರಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.