ಕೆ.ಎನ್.ಪಿ.ವಾರ್ತೆ,ಉಡುಪಿ,ಜು.19;
ಉಡುಪಿಯ ಅಷ್ಠಮಠಾಧೀಶರಲ್ಲೊಬ್ಬರಾದ ಶೀರೂರು ಲಕ್ಷ್ಮೀವರ ತೀರ್ಥ ಶ್ರೀಗಳು (55) ಇಂದು ಇಹಲೋಕ ತ್ಯಜಿಸಿದ್ದು, ಶೀರೂರು ಶ್ರೀ ಸಂಶಯಾಸ್ಪದ ಸಾವಿನ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು ಮೂಲ ಮಠದ ಎರಡು ಕೋಣೆಗಳನ್ನು ಸುಪರ್ದಿಗೆ ಪಡೆದು ಅಗತ್ಯ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಶ್ರೀಗಳು ಅಸ್ವಸ್ಥಗೊಂಡ ಹಿರಿಯಡ್ಕ ಸಮೀಪದ ಶೀರೂರು ಮಠದ ಅಡುಗೆ ಕೋಣೆ ಹಾಗೂ ಶ್ರೀಗಳು ಮಲಗುವ ಕೋಣೆಗಳ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ವಿಧಿವಿಜ್ಞಾನ ತಂಡ ಮಾಹಿತಿ ಕಲೆ ಹಾಕುತ್ತಿದೆ. ಉಡುಪಿ ಶೀರೂರು ಮಠದಲ್ಲೂ ಪೊಲೀಸರು ತನಿಖೆ ನಡೆಸಲಿದ್ದಾರೆ.
ಹಿರಿಯಡ್ಕ ಮೂಲ ಮಠಕ್ಕೆ ಪಶ್ಚಿಮ ವಲಯ ಐಜಿಪಿ ಅರುಣ್ ಚಕ್ರವರ್ತಿ ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣಕ್ಕೆ ಸಂಬಂಧಿಸಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದೆ. ಹಿರಿಯಡ್ಕ ಮೂಲ ಮಠಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ತನಿಖೆ ಪೂರ್ಣಗೊಂಡ ಬಳಿಕವೇ ಕೋಣೆಗಳನ್ನು ಮಠಕ್ಕೆ ನೀಡಲಾಗುವುದೆಂದು ಪೊಲೀಸ್ ಮೂಲಗಳು ತಿಳಿಸಿವೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬುಧವಾರ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಶ್ರೀಗಳನ್ನು ಮಣಿಪಾಲದ ಕೆಎಂಸಿಗೆ ದಾಖಲಿಸಲಾಗಿತ್ತು. ಅವರು ರಕ್ತವಾಂತಿ ಮಾಡಿದ್ದರಿಂದ ಸಂಜೆಯಿಂದಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದುಬಂದಿದೆ.
8ನೇ ವಯಸ್ಸಿಗೆ ಸನ್ಯಾಸತ್ವ ಸ್ವೀಕರಿಸಿದ ಶ್ರೀಗಳು ಮಠದ 30ನೇ ಯತಿಯಾಗಿ ನೇಮಕಗೊಂಡಿದ್ದರು. ತಂದೆ ವಿಠಲ ಆಚಾರ್ಯ, ತಾಯಿ ಕುಸುಮಾ ಆಚಾರ್ಯ. ಹೆಬ್ರಿ ತಾಲೂಕಿನ ಮಡಮಕ್ಕಿ ಮೂಲ ಮನೆಯಾಗಿದ್ದರೆ, ಹರೀಶ್ ಆಚಾರ್ಯ ಮೂಲ ನಾಮವಾಗಿತ್ತು.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.