ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಡಿ.19;

ಪೌರತ್ವ ತಿದ್ದುಪಡಿ ಕಾಯ್ದೆ 2019 (CAB) ವಿರೋಧಿಸಿ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಮುಂಜಾಗೃತ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡಿಸೆಂಬರ್ 21ರವರೆಗೂ ನಿಷೇಧಾಜ್ಞೆ ಹೇರಲಾಗಿದೆ.

ರಾಜ್ಯದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತ ಕ್ರಮವಾಗಿ ಇಂದು ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 21ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಹೇರಲಾಗಿದೆ.

ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಹಾಸನ ಸೇರಿದಂತೆ ರಾಜ್ಯದ ಆಯಾ ಜಿಲ್ಲೆಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ನಿಷೇದಾಜ್ಞೆ ಅವಧಿಯಲ್ಲಿ ನಾಲ್ಕು ಜನರ ಮೇಲ್ಪಟ್ಟು ಗುಂಪುಗಾರಿಕೆ ಮಾಡುವಂತಿಲ್ಲ, ಯಾವುದೇ ಮಾರಕಾಸ್ತ್ರಗಳನ್ನು ಹಿಡಿದು ಓಡಾಡುವಂತಿಲ್ಲ, ಮತೀಯ ಭಾವನೆಗಳನ್ನು ಕೆರಳಿಸುವಂತೆ ಹೇಳಿಕೆಗಳನ್ನು ನೀಡುವಂತಿಲ್ಲ, ಘೋಷಣೆಗಳನ್ನು ಮಾಡುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನು ಬೆಂಗಳೂರಿನಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿದ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಪ್ರತಿಭಟನೆಗೆ ನಾವು ಅವಕಾಶ ನೀಡಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ನಡೆಯುತ್ತವೆ. ಮಾರುಕಟ್ಟೆಗಳು, ಬಿಎಂಟಿಸಿ, ಕೆಎಸ್ಆರ್ಟಿಸಿಗೆ ನಿರ್ಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.