ಕೆ.ಎನ್.ಪಿ.ವಾರ್ತೆ,ಮಂಗಳೂರು,ಡಿ.20;

ಪೌರತ್ವ ತಿದ್ದುಪಡಿ ಕಾಯಿದೆ (CAB) ವಿರುದ್ಧ ರಾಜ್ಯಾದ್ಯಂತ ಭುಗಿಲೆದ್ದಿದ್ದು, ಹಿಂಸೆಗೆ ತತ್ತರಿಸಿದ ಮಂಗಳೂರಿನಲ್ಲಿ ಡಿಸೆಂಬರ್‌ 22ರ ಮಧ್ಯರಾತ್ರಿ ವರೆಗೆ ಕರ್ಫ್ಯೂ ಜಾರಿ ಮಾಡಲಾಗಿದೆ. 

ಪೌರತ್ವ ತಿದ್ದುಪಡಿ ಕಾಯಿದೆ (CAB) ವಿರುದ್ಧ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇಬ್ಬರು ಬಲಿಯಾಗಿದ್ದು, ಮಂಗಳೂರು ಶುಕ್ರವಾರ ಸಂಪೂರ್ಣ ಬಂದ್ ಆಗಿದೆ. 

ಗಲಭೆ ನಡೆದಿದ್ದ ಬಂದರು ಪ್ರದೇಶ, ಮೃತದೇಹಗಳಿರುವ ಆಸ್ಪತ್ರೆ ವಠಾರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಹೆಚ್ಚಿನ‌ ಪೊಲೀಸರನ್ನು ನಿಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸ್ವಯಂಪ್ರೇರಿತ ಬಂದ್‌ಗೆ ಕರೆ ನೀಡಲಾಗಿದೆ. ಹೆಚ್ಚಿನ‌ ಅಂಗಡಿ ಮುಂಗಟ್ಟು ಬಾಗಿಲು ತೆರೆದಿಲ್ಲ. ವಾಹನಗಳು ರಸ್ತೆಗೆ ಇಳಿದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರ ರಜೆ ಘೋಷಿಸಲಾಗಿದೆ. ರಾಜ್ಯದ ಎಂಜಿನಿಯರಿಂಗ್‌ ಕಾಲೇಜಿನ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಶಾಂತಿ ಕಾಪಾಡಲು ಸಿಎಂ ಬಿಎಸ್‌ ಯಡಿಯೂರಪ್ಪ, ಮುಸ್ಲಿಂ ಮುಖಂಡರು ಮನವಿ ಮಾಡಿದ್ದಾರೆ. ಶುಕ್ರವಾರವೂ ಪ್ರತಿಭಟನೆ ಮುಂದುವರಿಯುವ ಸಾಧ್ಯತೆ ಹೆಚ್ಚಿರುವುದರಿಂದ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.