ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.16;

ಪೌರತ್ವ ತಿದ್ದುಪಡಿ ಕಾಯ್ದೆ 2019 (CAB) ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪ್ರತಿಭಟನೆ ನಡೆಯುತ್ತಿದ್ದು ಜಾಮೀಯಾ ಮಿಲಿಯಾ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿದೆ.

ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ಉಂಟಾಗಿದ್ದು, ಕಲ್ಲು ತೂರಾಟ ನಡೆದಿದೆ. ಪೊಲೀಸರು ಲಾಠಿ ಚಾರ್ಜ್‌ ಹಾಗೂ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಪರಿಣಾಮ ವಿವಿ ಕ್ಯಾಂಪಸ್ ರಣಾಂಗಣವಾಗಿದ್ದು ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಲ್ಲಿ ವೈರಲ್ ಆಗುತ್ತಿವೆ.

ಕಾಯ್ದೆ ವಿರೋಧಿಸಿ ಜಾಮೀಯಾ ಮಿಲಿಯಾ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು. ಸಂಸತ್‌ಗೆ ಮುತ್ತಿಗೆ ಹಾಕಲು ಹೊರಟ ವಿದ್ಯಾರ್ಥಿಗಳನ್ನು ಪೊಲೀಸರು ತಡೆದರು.

ಈ ಸಂದರ್ಭದಲ್ಲಿ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾಗಿದೆ. ಕೆಲವು ಕಿಡಿಗೇಡಿಗಳು ಪೊಲೀಸರತ್ತ ಕಲ್ಲು ತೂರಾಟ ನಡೆಸಿದ್ದು ಇದಕ್ಕೆ ಪ್ರತಿಯಾಗಿ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದಾರೆ.

ಪ್ರತಿಭಟನಾನಿರತ ನೂರಾರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದರ ಬೆನ್ನಲ್ಲೇ ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ದೆಹಲಿ ಪೊಲೀಸ್ ಮುಖ್ಯಕಚೇರಿ ಮುಂಭಾಗದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಈ ಕುರಿತಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ದೆಹಲಿ ಹಿರಿಯ ಪೊಲೀಸ್ ಅಧಿಕಾರಿ, ಚಿನ್ಮಯಾ ಬಿಸ್ವಾಲ್ “ಜಾಮೀಯಾ ವಿವಿಯ ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ಬಳಿವಷ್ಟೇ ಪೊಲೀಸರು ವಿವಿ ಕ್ಯಾಂಪಸ್ ಪ್ರದೇಶ ಮಾಡಿದ್ದಾರೆ.

ಕಡಿಮೆ ಬಲ ಪ್ರಯೋಗ ಮಾಡಿ ವಿದ್ಯಾರ್ಥಿಗಳನ್ನು ಚದುರಿಸಿದ್ದೇವೆ. ವಿವಿ ಕ್ಯಾಂಪಸ್‌ ಒಳಗಡೆಯಿಂದ ಕೆಲವು ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಬಲ ಪ್ರಯೋಗ ನಡೆಸಿದ್ದಾರೆ” ಎಂದಿದ್ದಾರೆ.

ವಿವಿ ಪ್ರತಿಭಟನೆ ಹಾಗೂ ಪೊಲೀಸ್ ಲಾಠಿ ಚಾರ್ಜ್‌ ಕುರಿತಾಗಿ ಪ್ರತಿಕ್ರಿಯಿಸಿದ ಜಾಮೀಯಾ ಮಿಲಿಯಾ ಮುಸ್ಲಿಂ ವಿವಿ ಉಪಕುಲಪತಿ, ಪ್ರೊ. ನಜ್ಮಾ ಅಖ್ತರ್ “ವಿದ್ಯಾರ್ಥಿಗಳ ವಿರುದ್ಧ ನಡೆದ ಪೊಲೀಸ್‌ ದೌರ್ಜನ್ಯದಿಂದ ನೋವಾಗಿದೆ. ಅನುಮತಿ ಇಲ್ಲದೆ ವಿವಿ ಕ್ಯಾಂಪಸ್ ಪ್ರವೇಶಿಸಿ ಲೈಬ್ರೆರಿಯಲ್ಲಿ ವಿದ್ಯಾರ್ಥಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದು ಖಂಡನೀಯ” ಎಂದಿದ್ದಾರೆ.

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಬಂಧಿತ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿದೆ. ಕ್ಯಾಂಪಸ್ ಸುತ್ತ ಪೊಲೀಸ್ ಬಂದೋಬಸ್ಥ್ ಕೈಗೊಳ್ಳಲಾಗಿದೆ. ಹೀಗಿದ್ದರೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.