ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ನ.25;

ಉಪ ಚುನಾವಣೆ ಹಿನ್ನೆಲೆ ವಿಜಯನಗರ ಕ್ಷೇತ್ರ ದಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಕ್ಷೇತ್ರದ ಹಲವೆಡೆ ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡಿದರು.

ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದಲ್ಲಿ ವಿಜಯನಗರ ಕ್ಷೇತ್ರ ದ ಬಿಜೆಪಿ‌ ಅಭ್ಯರ್ಥಿ ಆನಂದ ಸಿಂಗ್ ಪರ ಪ್ರಚಾರ ಮಾಡಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಜಯನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆನಂದ ಸಿಂಗ್ ಈಗಾಗಲೇ ಗೆದ್ದಿದ್ದಾರೆ, ಇನ್ನು ಗೆಲುವಿನ ಅಂತರ ಎಷ್ಟು ಎಂದು ನೋಡಬೇಕಷ್ಟೆ ಎಂದು ಹೇಳಿದರು.

ಆನಂದ ಸಿಂಗ್ ಶಾಸಕರಾಗಿ ಆಯ್ಕೆಯಾದರೆ ಅವರನ್ನು ಮಂತ್ರಿ ಮಾಡಿದರೆ ಎಲ್ಲ ಸೌಲಭ್ಯ ನೀಡಲಾಗುವುದು. ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಚಾರ ಮಾಡಬೇಕು ಎಂದು ಯಡಿಯೂರಪ್ಪ ಹುರಿದುಂಬಿಸಿದರು.

ಯಡಿಯೂರಪ್ಪ ಪ್ರಚಾರ ನಡೆಸಿದ ಕಮಲಾಪುರದಲ್ಲೇ ಜೆಡಿಎಸ್ ಸಮಾವೇಶ ಕೂಡಾ ನಡೆಯಿತು.

ಈ ವೇಳೆ ಮಾತನಾಡಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಆನಂದ್ ಸಿಂಗ್ ವಿರುದ್ಧ ಹರಿಹಾಯ್ದರು. ‘ಆನಂದ್‌ ಸಿಂಗ್ ಮತ್ತೆ ನಿಮ್ಮೆದುರಿಗೆ ಬಂದಿದ್ದಾರೆ. ಕೈ ಬಿಟ್ಟು, ಕಮಲ ಹಿಡಿದು ಬಂದಿದ್ದಾರೆ.

ಗಣಿ ಲೂಟಿ ಮಾಡಿದ ಹಣ ನಿಮಗೆ ಕೊಡ್ತಾರೆ, ಅದಕ್ಕೆ ಮತ ಕೊಡಬೇಡಿ’ ಎಂದು ಮತದಾರರಲ್ಲಿ ಕುಮಾರಸ್ವಾಮಿ ಮನವಿ ಮಾಡಿದರು.

ಆನಂದ್ ಸಿಂಗ್ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಎಚ್ಡಿಕೆ ಕಿಡಿಕಾರಿದರು.

ಬಳಿಕ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ರೈತರ ಸಾಲ ಮನ್ನಾ, ಬೀದಿ ಬದಿ ವ್ಯಾಪಾರಿಗಳ ಸಾಲಮನ್ನಾ ಸೇರಿದಂತೆ ಎಚ್ಡಿಕೆ ಅಧಿಕಾರಾವಧಿಯ ಹಲವು ಯೋಜನೆಗಳನ್ನು ಸ್ಮರಿಸಿದರು. ಉತ್ತರ ಕರ್ನಾಟಕದಲ್ಲಿ ಪ್ರವಾಹ ಪರಿಸ್ಥಿತಿ ಎದುರಾದಾಗಲೂ ಬಿಜೆಪಿ ಸರಕಾರ ಸ್ಪಂದಿಸಿಲ್ಲ, ಆದ್ರೆ, ಕುಮಾರಸ್ವಾಮಿ ಜನರ ಬಳಿ ಹೋದರು ಎಂದು ಎಚ್‌.ಕೆ. ಕುಮಾರಸ್ವಾಮಿ ವಾದಿಸಿದರು.

ಒಟ್ಟು 15 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.

ಅಖಂಡ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ವಿಜಯನಗರ ಜಿಲ್ಲೆಯನ್ನು ರಚಿಸಲು ಈಗಾಗಲೇ ದಿನಾಂಕ ಘೋಷಣೆಯಾಗಿದೆ ಎಂದು ಆನಂದ್ ಸಿಂಗ್ ಹೇಳಿದ್ದರು. ಜನವರಿ 11 ರಂದು ಪ್ರತ್ಯೇಕ ವಿಜಯನಗರ ಜಿಲ್ಲೆಯ ನಾಮಕರಣವಾಗಲಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.