ಕೆ.ಎನ್.ಪಿ.ವಾರ್ತೆ,ಗದಗ,ಆ.10;

ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾಗಿರುವ ಜನರ ಮೇಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮುಂದೆಯೇ ಪೊಲೀಸರು ಲಾಠಿ ಬೀಸಿದ ಅಮಾನವೀಯ ಘಟನೆ ಗದಗ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ತಮ್ಮ ಕಣ್ಣೆದುರೇ ಸಂತ್ರಸ್ತರ ಮೇಲೆ ಲಾಠಿ ಪ್ರಹಾರ ನಡೆದರೂ ಯಡಿಯೂರಪ್ಪ ಅವರು ಅದನ್ನು ನೋಡಿಯೂ ನೋಡದಂತೆ ತೆರಳಿರುವುದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಉತ್ತರ ಕರ್ನಾಟಕದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಯಡಿಯೂರಪ್ಪ ಅವರು ಗದಗದ ಕೊಣ್ಣೂರು ಗ್ರಾಮಕ್ಕೆ ಆಗಮಿಸಿದ್ದರು. ಅಲ್ಲಿನ ಪ್ರವಾಹ ಸ್ಥಿತಿಯನ್ನು ಅವರು ವೀಕ್ಷಿಸಿದ್ದರು. ಆಗ ಕೆಲವು ಪ್ರವಾಹ ಸಂತ್ರಸ್ತರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಮಾತನಾಡಲು ಅವಕಾಶ ನೀಡುವಂತೆ ಕೋರಿದರು.

ಯಡಿಯೂರಪ್ಪ ಅವರ ಬಳಿ ತಮ್ಮ ಅಹವಾಲುಗಳನ್ನು ಸಲ್ಲಿಸಲು ಅವರ ಕಾರಿನ ಬಳಿ ಸಾಗಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಯಡಿಯೂರಪ್ಪ ಅವರ ಬಳಿ ಜನರು ಹೋಗದಂತೆ ತಡೆದಿದ್ದಾರೆ. ಅಲ್ಲದೆ, ಅವರ ಮೇಲೆ ಲಾಠಿ ಜಾರ್ಜ್ ಮಾಡುವ ಮೂಲಕ ಕ್ರೌರ್ಯ ಪ್ರದರ್ಶಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.