ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಆ.14;

ನಗರದ ಯಲಹಂಕ ನ್ಯೂಟೌನ್‍ನಲ್ಲಿ ಕಾಂಗ್ರೆಸ್ ಮುಖಂಡನೋರ್ವ ನೇಣಿಗೆ ಶರಣಾಗಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ವೀರಣ್ಣ ಗೌಡ (50) ಆತ್ಮಹತ್ಯೆಗೆ ಶರಣಾದ ಕಾಂಗ್ರೆಸ್ ಮುಖಂಡ. ಇವರು ಮೂಲತಃ ಹೆಸರುಘಟ್ಟ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 7:30ರ ಸುಮಾರಿಗೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವೀರಣ್ಣ ಗೌಡ ತಮ್ಮನ್ನು ಗುರುತಿಸಿಕೊಂಡಿದ್ದರು. ಅಲ್ಲದೆ, ವೃತ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಆಗಿದ್ದರು. ಕೆಲ ದಿನಗಳಿಂದ ಅವರು ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಇದರಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.