ಕೆ.ಎನ್.ಪಿ.ವಾರ್ತೆ,ನವದೆಹಲಿ,ನ.20;

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನವೆಂಬರ್ 30ರಂದು ನಡೆಸಲು ಉದ್ದೇಶಿಸಿದ್ದ ‘ಭಾರತ್ ಬಚಾವೊ’ ಪ್ರತಿಭಟನಾ ರ್ಯಾಲಿಯನ್ನು ಕಾಂಗ್ರೆಸ್, ಡಿಸೆಂಬರ್ 14ಕ್ಕೆ ಮುಂದೂಡಿದೆ.

‘ನವೆಂಬರ್ 30ರಂದು ದೆಹಲಿಯ ರಾಮ್‍ ಲೀಲಾ ಮೈದಾನದಲ್ಲಿ ನಿಗದಿಯಾಗಿದ್ದ ಭಾರತ್ ಬಚಾವೊ ಪ್ರತಿಭಟನಾ ರ್ಯಾಲಿಯ ದಿನಾಂಕವನ್ನು ಡಿ.14ಕ್ಕೆ ಮುಂದೂಡಲಾಗಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ದೇಶವ್ಯಾಪಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ನ.30 ರಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಭಾರತ್ ಬಚಾವೋ ಬೃಹತ್ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿತ್ತು. ಆದರೆ ಈಗ ದಿಢೀರ್ ರ್ಯಾಲಿಯನ್ನು ಮುಂದೂಡಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.