ಕೆ.ಎನ್.ಪಿ.ವಾರ್ತೆ,ದಾವಣಗೆರೆ,ಜೂ.15;

ಕ್ರೈಸ್ ವಸತಿ ಶಾಲೆಗಳಲ್ಲಿ ಘನ ಉಚ್ಛ ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಆದೇಶದಡಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರನ್ನು ಮುಂದುವರಿಸುವ ಕುರಿತು ಮತ್ತು ನೇಮಕಾತಿ ಪ್ರಕ್ರಿಯೆಯಿಂದ ವಿನಾಯಿತಿ ಕೋರಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಜೂ.14ರಂದು ಮನವಿ ಸಲ್ಲಿಸಲಾಯಿತು.

ಕರ್ನಾಟಕ ರಾಜ್ಯ ಘನ ಉಚ್ಛ ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಆದೇಶದ ಅಡಿ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಹೊಸದಾಗಿ ಅರ್ಜಿ ಕರೆದಿರುವ ನೇಮಕಾತಿ ಪ್ರಕ್ರಿಯೆಯಿಂದ ವಿನಾಯಿತಿ ನೀಡಿ, 2019-20 ರ ಶೈಕ್ಷಣಿಕ ಸಾಲಿಗೆ ಹಾಗೂ ನ್ಯಾಯಾಲಯದ ಅಂತಿಮ ತೀರ್ಪು ಹೊರ ಬೀಳುವವರೆಗೂ ಕರ್ತವ್ಯದಲ್ಲಿ ಮುಂದುವರಿಸಬೇಕೆಂದು ಕೋರಿ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘದ ವತಿಯಿಂದ ದಾವಣಗೆರೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲೇನಿದೆ?

ಮಾನ್ಯರೇ.,
ವಿಷಯ : ಕ್ರೈಸ್ ವಸತಿ ಶಾಲೆಗಳಲ್ಲಿ ಘನ ಉಚ್ಛ ನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆ ಆದೇಶದಡಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರನ್ನು ಮುಂದುವರಿಸುವ ಕುರಿತು.

ರಾಜ್ಯ ಕ್ರೈಸ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಗೊಂಡಿದ್ದು, ಹೊಸದಾಗಿ ಅರ್ಜಿ ಸಲ್ಲಿಸುವವರ ಜೊತೆ ಹಳಬರು ಅಥವಾ ಹಾಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಹಾಗೂ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ತಂದಿರುವ ಶಿಕ್ಷಕರು ಸಹ ಸಂದರ್ಶನ ಪ್ರಕ್ರಿಯೆಗೆ ಹಾಜರಾಗುವಂತೆ ಆಯಾ ಶಾಲಾ ಕಾಲೇಜಿನ ಪ್ರಾಂಶುಪಾಲರುಗಳು ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಮಾನ್ಯ ಉಪ ನಿರ್ದೇಶಕರುಗಳು ಸೂಚನೆ ನೀಡಿದ್ದಾರೆ.

ಆದರೆ ಹಳಬರು ಈಗಾಗಲೇ ನೇಮಕಾತಿ ಪ್ರಕ್ರಿಯೆ ಮತ್ತು ಸಂದರ್ಶನದಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯದ ಮೂಲಕವೇ ಆಯ್ಕೆಯಾಗಿ ಸೇವೆ ಸಲ್ಲಿಸುತ್ತಿರುವ ಕಾರಣ ಅಂತಹ ಅತಿಥಿ ಶಿಕ್ಷಕರನ್ನು ಹಾಗೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವ ಶಿಕ್ಷಕರನ್ನು ನೇಮಕಾತಿ ಪ್ರಕ್ರಿಯೆಯಿಂದ ವಿನಾಯಿತಿ ನೀಡಿ ಮುಂದುವರಿಸಬೇಕಾಗಿ ಕೋರುತ್ತೇವೆ.

ರಾಜ್ಯಾದ್ಯಂತ ಕ್ರೈಸ್ ಅಡಿ ಬರುವ ಎಲ್ಲಾ ವಸತಿ ಶಾಲಾ – ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲ ಅತಿಥಿ ಶಿಕ್ಷಕರು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಮೊರೆ ಹೋಗಿದ್ದು, ನ್ಯಾಯಾಲಯವು ಪ್ರಸ್ತುತ ಮಧ್ಯಂತರ ತಡೆಯಾಜ್ಞೆ ನೀಡಿದೆ. ನ್ಯಾಯಾಲಯ ತಡೆಯಾಜ್ಞೆ ನೀಡಿರುವ ಶಿಕ್ಷಕರನ್ನು ಈ 2019-20ನೇ ಶೈಕ್ಷಣಿಕ ಸಾಲಿನಲ್ಲಿ ಮುಂದುವರಿಸಬೇಕಾಗಿ ಕೋರಿ ಈಗಾಗಲೇ ಆಯಾ ಶಾಲಾ / ಕಾಲೇಜಿನ ಪ್ರಾಂಶುಪಾಲರು ಹಾಗೂ ಮಾನ್ಯ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಿಗೆ ನ್ಯಾಯಾಲಯದ ಆದೇಶ ಕಾಪಿಯೊಂದಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಸಹ ಪ್ರತಿ ವರ್ಷವೂ ನೇಮಕಾತಿ ಪ್ರಕ್ರಿಯೆ ಮೂಲಕವೇ ಬರಬೇಕೆಂದು ಇಲಾಖೆ ಒತ್ತಡ ಹೇರಿದೆ. ಅಭ್ಯರ್ಥಿತನವನ್ನು ಎಷ್ಟು ಬಾರಿ ಪರೀಕ್ಷಿಸಲಾಗುವುದು ? ಇದು ಅತಿಥಿ ಶಿಕ್ಷಕರಿಗೆ ನೀಡುತ್ತಿರುವ ಮಾನಸಿಕ ಹಿಂಸೆ, ಅನಗತ್ಯ ಕಿರುಕುಳ, ಶೋಷಣೆಯ ದುರುದ್ದೇಶದ ಪ್ರಕ್ರಿಯೆಯಾಗಿದೆ. ಅಲ್ಲದೆ ನ್ಯಾಯಾಲಯ ಆದೇಶದ ಉಲ್ಲಂಘನೆಯೂ ಆಗುತ್ತದೆ.

ಈ ಕುರಿತು ದಾವಣಗೆರೆ ಸಮಾಜ ಕಲ್ಯಾಣ ಇಲಾಖೆಯ ಮಾನ್ಯ ಉಪನಿರ್ದೇಶಕರಾದ ಶ್ರೀ ಶಿವಾನಂದ ಕುಂಬಾರ ಅವರನ್ನು ಸಂಪರ್ಕಿಸಿದಾಗ – “ನಾನು ನ್ಯಾಯಾಲಯಕ್ಕೆ ಚಾಲೆಂಜ್ ಮಾಡುತ್ತೇನೆ, ತಡೆಯಾಜ್ಞೆ ತಂದಿರುವವರು ಸಹ ನೇಮಕಾತಿ ಪ್ರಕ್ರಿಯೆಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಹೇಳಿದ್ದಾರೆ.” ಆದರೆ ಕಾನೂನು ತಿಳಿದಿರುವ ಅವರು ಘನ ಉಚ್ಛ ನ್ಯಾಯಾಲಯದ ಆದೇಶವನ್ನು ಗೌರವಿಸಿಲ್ಲ ಹಾಗೂ ಯಾವುದೇ ಲಿಖಿತ ನೋಟಿಸ್ ಸಹ ನೀಡಿಲ್ಲ.

ನಮ್ಮ ಕೋರಿಕೆ ಇಷ್ಟೇ, ದಯವಿಟ್ಟು ಇಲಾಖೆಯ ಅಧಿಕಾರಿಗಳು, ಘನ ಉಚ್ಛ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆಯ ಆದೇಶ ನೀಡಿರುವ ಅತಿಥಿ ಶಿಕ್ಷಕರಿಗೆ ನೇಮಕಾತಿ ಪ್ರಕ್ರಿಯೆಯಿಂದ ವಿನಾಯಿತಿ ನೀಡಿ ಈ 2018 – 19 ನೇ ಶೈಕ್ಷಣಿಕ ಸಾಲಿಗೂ ಹಾಗೂ ನ್ಯಾಯಾಲಯದಲ್ಲಿ ಅಂತಿಮ ತೀರ್ಪು ಹೊರಬೀಳುವವರೆಗೂ ಮುಂದುವರಿಸಬೇಕು. ಇಲ್ಲವಾದರೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಈ ಮೂಲಕ ತಿಳಿಸುತ್ತಿದ್ದೇವೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.