ಕೆ.ಎನ್.ಪಿ.ವಾರ್ತೆ,ಮಂಗಳೂರು,ಸೆ.07;

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಉಡುಪಿ ಜಿಲ್ಲಾ ಪಂಚಾಯತ್ ಸಿ ಇ ಒ ಸಿಂಧು ಬಿ ರೂಪೇಶ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನಿನ್ನೆ ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಜ್ಯ ಸರ್ಕಾರ ಸಿಂಧು ರೂಪೇಶ್ ಅವರನ್ನು ಮಂಗಳೂರಿಗೆ ಡಿಸಿ ಆಗಿ ವರ್ಗಾಯಿಸಿತು.

ಬೆಂಗಳೂರಿನಲ್ಲಿ ಹಣಕಾಸು ಇಲಾಖೆ ಬಜೆಟ್ ಮತ್ತು ಸಂಪನ್ಮೂಲ ವಿಭಾಗದ ಉಪಕಾರ್ಯದರ್ಶಿಯಾಗಿದ್ದ ಸಿಂಧು ಬಿ.ರೂಪೇಶ್ ಅವರನ್ನು 2018ರ ನವೆಂಬರ್ ತಿಂಗಳಿನಲ್ಲಿ ಉಡುಪಿ ಜಿಪಂ ಸಿಇಒ ಆಗಿ ನೇಮಕ ಮಾಡಲಾಗಿತ್ತು.

ಮೈಸೂರಿನ ಇಂಜಿನಿಯರಿಂಗ್ ಪದವೀಧರೆಯಾಗಿರುವ ಸಿಂಧು 2011 ಬ್ಯಾಚ್‌ನ ಐಎಎಸ್ ಅಧಿಕಾರಿ. ಅವರು ಆ ವರ್ಷದ ರಾಜ್ಯದ ನಾಗರಿಕ ಸೇವಾ ಪರೀಕ್ಷೆಯಲ್ಲಿ (ಸಿವಿಲ್ ಸರ್ವೀಸ್ ಪರೀಕ್ಷೆ) ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದರು.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.