ಕೆ.ಎನ್.ಪಿ.ವಾರ್ತೆ,ನವದೆಹಲಿ,ಆ.22;

ಸಂತ ರವಿದಾಸ್ ದೇಗುಲ ನೆಲಸಮ ವಿರೋಧಿಸಿ ಭೀಮ್ ಆರ್ಮಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಸಂಘಟನೆಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ದೆಹಲಿಯ ತುಘಲಕಾಬಾದ್ ನಲ್ಲಿ ಪೊಲೀಸರು ಮತ್ತು ನೂರಾರು ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದ ನಂತರ ಭೀಮ್ ಸೇನೆಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಸೇರಿದಂತೆ 50 ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘರ್ಷಣೆಯಲ್ಲಿ ಪ್ರತಿಭಟನಾಕಾರರು, ಅನೇಕ ಪೊಲೀಸರು ಗಾಯಗೊಂಡಿದ್ದಾರೆ. ಬಂಧಿತ ಆಜಾದ್ ಅವರನ್ನು ವಿಚಾರಣೆಗೆ ಒಳಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.