ಕೆ.ಎನ್.ಪಿ.ವಾರ್ತೆ,ಕಾರವಾರ,ಏ.26;

ದೇಶದ ಅತಿ ದೊಡ್ಡ ಯುದ್ಧ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದ ಬಾಯ್ಲರ್ ನಲ್ಲಿ ಶುಕ್ರವಾರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ನೌಕಾಪಡೆ ಅಧಿಕಾರಿ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಐಎನ್‍ಎಸ್ ವಿಕ್ರಮಾದಿತ್ಯ ಇಂದು ಬೆಳಗ್ಗೆ ಕಾರವಾರದ ಕದಂಬ ನೌಕಾನೆಲೆಗೆ ಆಗಮಿಸಿದ ವೇಳೆ ನೌಕೆಯ ಒಳಭಾಗದ ಬಾಯ್ಲರ್ ಕಂಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸುವ ಸಮಯದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಡಿಎಸ್ ಚೌವ್ಹಾಣ್ ಮೃತಪಟ್ಟು, 7 ಜನ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಗಾಯಾಳುಗಳನ್ನು ನೌಕಾನೆಲೆಯ ಪತಂಜಲಿ ಆಸ್ಪತ್ರೆಗೆ ದಾಖಲಿಸಿದ್ದು, ಬಾಯ್ಲರ್ ನಲ್ಲಿದ್ದ ಬೆಂಕಿಯನ್ನು ಸಿಬ್ಬಂದಿ ನಿಯಂತ್ರಣಕ್ಕೆ ತಂದು ದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.