ಕೆ.ಎನ್.ಪಿ.ವಾರ್ತೆ,ಹಾವೇರಿ,ನ.27;

ಸ್ವಚ್ಛತೆಗಾಗಿ ಏನೆಲ್ಲಾ ಕಾರ‍್ಯಕ್ರಮ ನಡೆಯುತ್ತಿದೆ. ಆದರೆ ಇಲ್ಲಿ ಮಾತ್ರ ತಿಂಗಳ ಹಿಂದೆ ತೆಗೆದ ಚರಂಡಿ ಕಸವನ್ನು ವಿಲೇವಾರಿ ಮಾಡದೇ ಹಾಗೇ ಬಿಡಲಾಗಿದೆ.

ಇದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ತಕ್ಷಣ ಇಲ್ಲಿಂದ ಕಸ ವಿಲೇವಾರಿ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ತಾಲೂಕಿನ ಕಳ್ಳಿಹಾಳ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೊಣೆಪ್ಪನವರ ಓಣಿ (ವಾರ್ಡ್ ನಂ-2)ಯಲ್ಲಿ ತಿಂಗಳ ಹಿಂದೆ ತೆಗೆದ ಚರಂಡಿ ಕಸವನ್ನು ಸಮಯಕ್ಕೆ ಸರಿಯಾಗಿ ವಿಲೇವಾರಿ ಮಾಡದೇ ಅಧಿಕಾರಿಗಳು ಹಾಗೇ ಬಿಟ್ಟಿದ್ದಾರೆ.

ಅದರಿಂದ ರಸ್ತೆಯಲ್ಲಿ ತಿಪ್ಪೆ ಹಾಗೂ ಕಸದ ರಾಶಿ ಬಿದ್ದಿದ್ದು ಸಾರ್ವಜನಿಕರು ಮೂಗು ಮುಚ್ಚಿಕೊಂಡು ನಡೆದಾಡುವ ಪರಿಸ್ಥಿತಿ ಎದುರಾಗಿದೆ.

ಆದ್ದರಿಂದ ಗ್ರಾಮದ ಯುವಕರು ಪಂಚಾಯತಿ ಅಧಿಕಾರಿಗಳಿಗೆ ಕಸವನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಆದ ಕಾರಣ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತು ಸಮಯಕ್ಕೆ ಸರಿಯಾಗಿ ಕಸವನ್ನು ಸ್ಥಳಾಂತರ ಮಾಡಬೇಕಾಗಿದೆ.

ವರದಿ : ಮಂಜುನಾಥ ದಾಸಣ್ಣನವರ್

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.