ಕೆ.ಎನ್.ಪಿ.ವಾರ್ತೆ,ರಾಮನಗರ,ಸೆ.05;

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹಾಗೂ ಜೆಡಿಎಸ್ ಕಾರ್ಯಕರ್ತರು ಇಂದು ರಾಮನಗರ ಜಿಲ್ಲೆ ಸಂಪೂರ್ಣ ಬಂದ್‌ಗೆ ಕರೆ ನೀಡಿದ್ದಾರೆ.

ಜಿಲ್ಲೆಯ ಮಾಗಡಿ, ಕನಕಪುರ, ಚನ್ನಪಟ್ಟಣ ಹಾಗೂ ರಾಮನಗರ ತಾಲೂಕುಗಳಲ್ಲಿ ಬಂದ್ ಜಾರಿಯಲ್ಲಿರಲಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಸಂಚಾರದಲ್ಲಿ‌ ಅಸ್ತವ್ಯಸ್ತ ಉಂಟಾಗುವ ಸಾಧ್ಯತೆ ಇದ್ದು ಮುಂಜಾಗ್ರತಾ ಕ್ರಮವಾಗಿ ಇಂದು ಕೂಡ ಶಾಲಾ ಕಾಲೇಜಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಜಿಲ್ಲಾಕೇಂದ್ರದ ವಿವಿಧ ರಸ್ತೆಗಳಲ್ಲಿ ಜೆಡಿಎಸ್ ಹಾಗು ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸುವ ಮೂಲಕ‌ ಆಕ್ರೋಶ ವ್ಯಕ್ತಪಡಿಸಿದರು. ಬಂದ್ ಗೆ ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದರು. ಕೆಲವೆಡೆ ಬಲವಂತವಾಗಿ ಅಂಗಡಿ ಬಾಗಿಲುಗಳನ್ನು‌ ಮುಚ್ಚಿಸಲಾಗುತ್ತಿದೆ ಎಂಬ ಆರೋಪವು ಕೇಳಿಬಂದಿದೆ. 10 ಗಂಟೆ ಬಳಿಕ ಪ್ರತಿಭಟನೆ ತೀವ್ರಗೊಳ್ಳಲಿದ್ದು, 12 ಗಂಟೆಗೆ ಪಾದಯಾತ್ರೆ ಮಾಡುವ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ‌ ಸಲ್ಲಿಸಲಿದ್ದಾರೆ.

ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್

ಬಂದ್ ಹಿನ್ನಲೆಯಲ್ಲಿ‌ ಜಿಲ್ಲಾ ಕೇಂದ್ರವಾದ ರಾಮನಗರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದ್ದು, ನಗರದ ಐಜೂರು ವೃತ್ತದಲ್ಲಿ ನೂರಕ್ಕು ಹೆಚ್ಚು ಪೊಲೀಸರು ಕಾವಲಿದ್ದು, ಜಿಲ್ಲಾದ್ಯಂತ 1 ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನೇಮಕ ಮಾಡಲಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.