ಕೆ.ಎನ್.ಪಿ.ವಾರ್ತೆ,ನವದೆಹಲಿ,ಡಿ.19;

2019ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬುಧವಾರ ಪ್ರಕಟಗೊಂಡಿದ್ದು, ಕನ್ನಡದ ಹಿರಿಯ ಪತ್ರಕರ್ತೆ ಡಾ. ವಿಜಯಾ ಅವರಿಗೆ ಪ್ರಶಸ್ತಿ ಸಂದಿದೆ.

ವಿಜಯಾ ಅವರ ಆತ್ಮಕಥೆ “ಕುದಿ ಎಸರು” ಕೃತಿಗಾಗಿ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು ಒಂದು ಲಕ್ಷ ನಗದು ಹಾಗೂ ಸ್ಮರಣಿಕೆ ಒಳಗೊಂಡಿದ್ದು ೨೦೨೦ ಫೆಬ್ರವರಿ ೨೫ ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಲಿದೆ.

ಮೂವರು ಹಿರಿಯ ಸಾಹಿತಿಗಳಾದ ಡಾ. ಬಿ.ಆರ್‌. ಲಕ್ಷ್ಮಣರಾವ್‌, ಡಾ. ನಾ. ದಾಮೋದರ ಶೆಟ್ಟಿ ಹಾಗೂ ಡಾ. ಲತಾ ಗುತ್ತಿ ಅವರು ಕನ್ನಡದ ಪ್ರಶಸ್ತಿಯ ಆಯ್ಕೆ ಸಮಿತಿಯಲ್ಲಿದ್ದರು.

ಸಾಮಾಜಿಕ ಅಸಮಾನತೆ, ಶೋಷಣೆ, ದಬ್ಬಾಳಿಕೆ, ಅನ್ಯಾಯಗಳ ವಿರುದ್ಧ ದನಿ ಎತ್ತುವ, ಮಹಿಳೆಯರ ಸಮಸ್ಯೆಗಳು, ಭಾಷಾಚಳವಳಿ ಮುಂತಾದ ಚಳವಳಿಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಸಿಕೊಂಡಿರುವ ಡಾ. ವಿಜಯಾ ಹಲವಾರು ವರ್ಷಗಳಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ.

ಡಾ. ವಿಜಯಾ ಅವರ “ಕುದಿ ಎಸರು- ತಿಟ್ಹತ್ತಿ ತಿರುಗಿ ನೋಡಿದಾಗ” ಒಂದು ಅಪರೂಪದ ಪುಸ್ತಕವಾಗಿದ್ದು ಯಾವ ಆತ್ಮ ಚರಿತ್ರಕಾರರೂ ದಾಖಲಿಸದ, ನಿರೂಪಿಸದ ತೀರಾ ಖಾಸಗಿ ಎನ್ನುವಂತಹ ಅನುಭವಗಳನ್ನೂ ಸಹ ಒಳಗೊಂಡಿದೆ.

ಇದು ಓದುಗರನ್ನು ಸಂವೇದನೆಗೆ ಎಳೆದೊಯ್ಯುವ ಮೂಲಕ ಓದುಗರಿಗೆ ಹೊಸ ಅರಿವನ್ನು ಮೂಡಿಸಲಿದೆ. ಈ ಅರಿವು ಮನುಷ್ಯತ್ವದೆಡೆಗೆ ನಮ್ಮನ್ನು ಕೊಂಡೊಯ್ಯಲಿದೆ ಎಂದು ಅವರು ಆಪ್ತವಾಗಿ ಬರೆದುಕೊಳ್ಳುತ್ತಾರೆ.

ಶಶಿ ತರೂರ್‌ಗೂ ಪ್ರಶಸ್ತಿ

ರಾಜಕಾರಣಿ, ಬರಹಗಾರ ಮತ್ತು ಕಾಂಗ್ರೆಸ್ ಪಕ್ಷದ ಸದಸ್ಯರಾಗಿರುವ ಶಶಿ ತರೂರ್ ಅವರಿಗೆ ಸಹ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಅವರ ಆನ್ ಎರಾ ಆಫ್ ಡಾರ್ಕ್ನೆಸ್: ದಿ ಬ್ರಿಟಿಷ್ ಎಂಪೈರ್ ಇನ್ ಇಂಡಿಯಾ ಎಂಬ ಪುಸ್ತಕಕ್ಕಾಗಿ ಪ್ರತಿಷ್ಠಿತ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಸಾಹಿತ್ಯ ಅಕಾಡೆಮಿ ತನ್ನ ವಾರ್ಷಿಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳನ್ನು 23 ಭಾಷೆಗಳಲ್ಲಿ ಪ್ರಕಟಿಸುವ ಪತ್ರಿಕಾ ಪ್ರಕಟಣೆಯನ್ನು ನಿನ್ನೆ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಶಶಿ ತರೂರ್ ಹೆಸರಿದ್ದು ಇಂಗ್ಲಿಷ್ ಭಾಷೆಯಲ್ಲಿ ಸೃಜನಶೀಲ ಕಾಲ್ಪನಿಕರಹಿತ ಸಾಹಿತ್ಯ ಸೃಷ್ಟಿಗಾಗಿ ಅವರಿಗೆ ಪ್ರಶಸ್ತಿ ಒಲಿದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.