ಕೆ.ಎನ್.ಪಿ.ವಾರ್ತೆ,ಬೆಂಗಳೂರು,ನ.13;
ಭಾರತದ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎನ್ನುವ ಕೈಪಿಡಿಯನ್ನು ಹೊರ ತಂದಿದ್ದ ಪ್ರೌಢ ಶಿಕ್ಷಣ ಇಲಾಖೆ ನಿರ್ದೇಶಕ ‘ಮಣಿ’ ಎಂಬುವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ.
“ಅಂಬೇಡ್ಕರ್ ಸಂವಿಧಾನ ರಚಿಸಿಲ್ಲ ಎನ್ನುವ ಕೈಪಿಡಿಯನ್ನು ಸರ್ಕಾರದ ಗಮನಕ್ಕೆ ತರದೇ ಈ ಅಧಿಕಾರಿ ಆನ್‌ಲೈನ್‌ನಲ್ಲೂ ಅಪ್ಲೋಡ್ ಮಾಡುವ ಕುರಿತು ಸುತ್ತೋಲೆ ಹೊರಡಿಸಿದ್ದರು.
ನಮ್ಮ ಗಮನಕ್ಕೆ ಬಂದ ಕೂಡಲೇ ಕೈಪಿಡಿಯನ್ನು ವಾಪಸ್ ಪಡೆದಿದ್ದು, ಇದು ಸರ್ಕಾರ ಅಥವಾ ಶಿಕ್ಷಣ ಇಲಾಖೆಯ ನಿಲುವಲ್ಲ” ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಅಂಬೇಡ್ಕರ್ ಬಗ್ಗೆ ದೇಶದಲ್ಲಿ ಹೆಮ್ಮೆ, ಗೌರವ ಇದೆ. ಅವರಿಗೆ ಅವಮಾನವಾಗುವುದು ಸರಿಯಲ್ಲ. ಈ ವಿಚಾರದಲ್ಲಿ ಶಿಕ್ಷಣ ಇಲಾಖೆ ನಿರ್ದೇಶಕರಿಂದ ಕರ್ತವ್ಯ ಲೋಪವಾಗಿದೆ. ಕೂಡಲೇ ಅವರನ್ನು ಅಮಾನತು ಮಾಡಲಾಗುತ್ತಿದೆ. ಈ ಘಟನೆ ಬಗ್ಗೆ ಇಲಾಖೆಯಿಂದ ಸೂಕ್ತ ವಿಚಾರಣೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
ಅಷ್ಟಕ್ಕೂ ನಡಿದಿದ್ದೇನು..? ಯಾರು ಈ ಮಣಿ..?
ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಕಚೇರಿಯ ಪ್ರೌಢ ಶಿಕ್ಷಣ ನಿರ್ದೇಶಕರು ದಿನಾಂಕ:೨೮-೧೦-೨೦೧೯ ರಂದು ಸುತ್ತೋಲೆ ಹೊರಡಿಸಿ ನವೆಂಬರ್ ೨೬ ರಂದು ‘ಸಂವಿಧಾನ ದಿನ’ವನ್ನಾಗಿ ಆಚರಿಸಲು ಸೂಚಿಸಿದ್ದಾರೆ. ಆ ಆದೇಶ ಪುಟ ೫ರಲ್ಲಿ “ಸಂವಿಧಾನವನ್ನು (ಡಾ.ಬಿ.ಆರ್. ಅಂಬೇಡ್ಕರ್) ಅವರೊಬ್ಬರೇ ಬರೆದಿರುವುದಿಲ್ಲ” ಎಂದು ನಮೂದಿಸಿದ್ದಾರೆ.
ಈ ಸುತ್ತೋಲೆ ಪತ್ರವನ್ನು ನೋಡಿದಾಗ ಬಹುಶಃ ಶಿಕ್ಷಣ ಇಲಾಖೆ ನಿರ್ದೇಶಕ ‘ಮಣಿ’ಯವರಿಗೆ ಸಂವಿಧಾನದ ಚಾರಿತ್ರಿಕ ಹಿನ್ನೆಲೆಯ ಅರಿವಿಲ್ಲ ಎಂದು ಸಾರ್ವಜನಿಕ ಟೀಕೆಗೆ ಗುರಿಯಾಗಿದ್ದಾರೆ.
ಇದರಿಂದ ವಿದ್ಯಾರ್ಥಿ ಮತ್ತು ಶಿಕ್ಷಕರಲ್ಲಿ ಗೊಂದಲಮಯವಾಗಿತ್ತು. ಆ ಒಂದು ಹೇಳಿಕೆಯಿಂದ ಇಡೀ ಸರ್ಕಾರವೇ ತಲೆ ತಗ್ಗಿಸುವ ವಾತಾವರಣ ನಿರ್ಮಾಣವಾಗಿತ್ತು.
ಈಗ ಶಿಕ್ಷಣ ಇಲಾಖೆ ನಿರ್ದೇಶಕ ‘ಮಣಿ’ಯವರನ್ನು ಅಮಾನತು ಮಾಡಿದ್ದು ಮತ್ತು ಆ ವಿವಾದಿತ ಕೈಪಿಡಿಯನ್ನು ವಾಪಸ್ ಪಡೆದಿರುವುದು ಆಗಿರುವ ಎಲ್ಲ ಗೊಂದಲಗಳಿಗೆ ತೆರೆ ಎಳೆದಂತಾಗಿದೆ.
ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…
ನೀವು ಕೂಡ ಬರೆಯಬಹುದು :
ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.
ಈ-ವಿಳಾಸ : karnatakanewsportal@gmail.com
ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.