ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.28;

ಇಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಎಲ್ಲ ಶಾಸಕರಿಗೂ ಒಗ್ಗಟ್ಟಾಗಿರುವಂತೆ ಸೂಚಿಸಿರುವ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, ಯಾವುದೇ ಆಮಿಷಗಳಿಗೆ ಒಳಗಾಗದಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸೋಮವಾರ ಬಹುಮತ ಸಾಬೀತುಪಡಿಸುವ ವರೆಗೂ ಎಲ್ಲ ಶಾಸಕರನ್ನೂ ಹೋಟೆಲ್‌ನಲ್ಲಿ ಇರಿಸಲು ನಿರ್ಧರಿಸಲಾಗಿದೆ. ಮೈತ್ರಿ ಸರಕಾರ ಪತನಗೊಂಡ ಬಳಿಕ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಿಜೆಪಿ ಸರಕಾರ ಹೇಗೆ ಬಹುಮತ ಸಾಬೀತುಪಡಿಸುತ್ತದೋ ನೋಡೋಣ ಎಂದು ಸವಾಲು ಹಾಕಿದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಶೇಷ ಎಚ್ಚರ ವಹಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ 105 ಶಾಸಕರನ್ನು ಹೊಂದಿದ್ದು, ಒಬ್ಬ ಪಕ್ಷೇತರ ಶಾಸಕ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಒಟ್ಟು 106 ಸಂಖ್ಯಾಬಲ ಹೊಂದಿದೆ. ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ಅಥವಾ ತಿರಸ್ಕಾರದ ಬಗ್ಗೆ ಸ್ಪೀಕರ್ ರಮೇಶ್ ಕುಮಾರ್ ನಾಳೆ ವಿಧಾನಸಭೆ ಕಲಾಪಕ್ಕೆ ಮುನ್ನವೇ ತೀರ್ಮಾನಿಸುವ ಸಾಧ್ಯತೆಯಿದ್ದು, ಮೇಲ್ನೋಟಕ್ಕೆ ಬಿಎಸ್‌ವೈ ಸರಕಾರ ಬಹುಮತ ಸಾಬೀತು ಪಡಿಸುವುದು ನಿಚ್ಚಳವಾಗಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.