ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜು.10;

ರಾಜ್ಯ ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿರುವುದರಿಂದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಕೂಡಲೇ ರಾಜೀನಾಮೆ ನೀಡಬೇಕೆಂದು ಭಾರತೀಯ ಜನತಾ ಪಾರ್ಟಿ ಆಗ್ರಹಿಸಿದ್ದು ಈ ಸಂಬಂಧ ಬುಧವಾರ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಲಿದ್ದಾರೆ.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿನ 14 ಶಾಸಕರ ಪೈಕಿ 11 ಕಾಂಗ್ರೆಸ್ ಶಾಸಕರು ಮತ್ತು ಮೂವರು ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ನಮ್ಮ ಶಾಸಕರ ಜೊತೆ ಚರ್ಚೆ ಮಾಡಿದ್ದು, ಇಂದು ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇನ್ನೊಂದೆಡೆ ರಾಜ್ಯಪಾಲ ವಜುಭಾಯಿ ವಾಲಾ ಭಾರತೀಯ ಜನತಾ ಪಾರ್ಟಿಗೆ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್-ಜೆಡಿಎಸ್ ನಾಯಕರು ಇಂದು ರಾಜ್ಯಪಾಲರ ಕಚೇರಿ ಎದುರು ಪ್ರತಿಭಟನೆ ನಡೆಸಲಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.