ಕೆ.ಎನ್.ಪಿ.ವಾರ್ತೆ,ತುಮಕೂರು,ಅ.30;

ಖಾಸಗಿ ಬಸ್ಸೊಂದು ರಸ್ತೆಯಲ್ಲೇ ಉರುಳಿಬಿದ್ದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೊರಟಗೆರೆ ತಾಲೂಕಿನ ಜೆಟ್ಟಿ ಅಗ್ರಹಾರ ಬಳಿ ಇಂದು ಬೆಳಗ್ಗೆ ನಡೆದಿದೆ.

ವಿಜಯಲಕ್ಷ್ಮೀ ಎಂಬ ಖಾಸಗಿ ಬಸ್ ಇಂದು ಬೆಳಗ್ಗೆ ಕೊರಟಗೆರೆಯಿಂದ ತುಮಕೂರು ಕಡೆಗೆ ತೆರಳುತ್ತಿದ್ದಾಗ ಜೆಟ್ಟಿ ಅಗ್ರಹಾರ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿ ಹೊಡೆದು ಈ ಅವಘಡ ಸಂಭವಿಸಿದೆ.

20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅದರಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ. ಅವರನ್ನು ತುಮಕೂರು ಆಸ್ಪತ್ರೆಗೆ ಸಾಗಿಸಲಾಗಿದೆ. ಇದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಮೂಡಿದೆ. ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.