ಕೆ.ಎನ್.ಪಿ.ವಾರ್ತೆ,ಭೋಪಾಲ್,ನ.24;

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿಯ ಹಿರಿಯ ಮುಖಂಡ ಕೈಲಾಶ್ ಜೋಶಿ (90) ಭಾನುವಾರ ನಿಧನರಾದರು.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಕೈಲಾಶ್ ಜೋಶಿ ಭೋಪಾಲ್‌ನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜುಲೈ 14, 1929 ರಂದು ಜನಿಸಿದ ಕೈಲಾಶ್ ಜೋಶಿ ಅವರನ್ನು ‘ರಾಜಕೀಯದ ಸಂತ’ ಎಂದು ಕರೆಯಲಾಗುತ್ತಿತ್ತು, 1977 ರಿಂದ 1978 ರವರೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಸೇವೆ ಸಲ್ಲಿಸಿದ್ದರು. ಎಂಟು ಬಾರಿ ಶಾಸಕರಾಗಿದ್ದ ಅವರು ರಾಜ್ಯಸಭೆ ಮತ್ತು ಲೋಕಸಭೆಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.

ಮಾಜಿ ಮುಖ್ಯಮಂತ್ರಿ ಕೈಲಾಶ್ ಜೋಶಿ ಅಂತ್ಯ ಸಂಸ್ಕಾರ ಸೋಮವಾರ ದೇವಾಸ್ ಜಿಲ್ಲೆಯ ಅವರ ಹುಟ್ಟೂರು ಹತ್ಪಿಪಾಲ್ಯದಲ್ಲಿ ನಡೆಸಲಾಗುವುದು ಎಂದು ಬಿಜೆಪಿ ಮಾಜಿ ಸಂಸದ ಅಲೋಕ್ ಸಂಜರ್ ತಿಳಿಸಿದ್ದಾರೆ.

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.