ಕೆ.ಎನ್.ಪಿ.ವಾರ್ತೆ,ಗಂಗಾವತಿ,ಸೆ.22;

ತಾಲೂಕಿನ ಡಣಾಪೂರ ಗ್ರಾಮದಲ್ಲಿ ಇಂದು ಗಣೇಶ ವಿಗ್ರಹಗಳ ಸಾಮೂಹಿಕ ಮೆರವಣಿಗೆ ಮತ್ತು ವಿಸರ್ಜನೆ ಕಾರ್ಯಕ್ರಮ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ನಡೆಯಿತು.

ಮೆರವಣಿಗೆಯಲ್ಲಿ ಗಣೇಶ ವಿಗ್ರಹಗಳು ವಿವಿಧ ಜಾನಪದ ಕಲಾ ತಂಡಗಳ ವಾದನಗಳೊಂದಿಗೆ ಪ್ರಮುಖ ಬೀದಿಗಳಲ್ಲಿ ಸಾಗಿದವು. ನೂರಾರು ಭಕ್ತರು, ಕಲಾವಿದರೊಂದಿಗೆ ಜಾನಪದ ನೃತ್ಯಗಳಲ್ಲಿ ಹೆಜ್ಜೆ ಹಾಕಿ ಸಂಭ್ರಮಿಸಿದರು. ಪಟಾಕಿ ಸಿಡಿಸುವ ಮೂಲಕ ಗಣೇಶನಿಗೆ ಭಕ್ತಿ ಮೆರೆದರು.

ಕಳಸ, ಭಜನೆಯಿಂದ ಭಕ್ತಿಯ ಹಾಡುಗಳನ್ನು ಹಾಡುತ್ತಾ, ಡೊಳ್ಳು ಕುಣಿತ ಸೇರಿದಂತೆ ಇತರೆ ಮಂಗಳ ವಾಧ್ಯಗಳೊಂದಿಗೆ ನೂರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ ಭಕ್ತಿಯಿಂದ ಅದ್ದೂರಿಯಾಗಿ ಗಣೇಶನ ವಿಸರ್ಜನೆ ಕಾರ್ಯಕ್ರಮ ನಡೆಯಿತು.

ವರದಿ : ಹನುಮೇಶ್ ಡಣಾಪುರ

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.