ಕೆ.ಎನ್.ಪಿ.ವಾರ್ತೆ,ಬೆಂಗಳೂರು,ಜೂ.10;

ಹಿರಿಯ ಸಾಹಿತಿ, ರಂಗಕರ್ಮಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಗಿರೀಶ್ ಕಾರ್ನಾಡ್ (81) ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲಾ-ಕಾಲೇಜುಗಳು ಮತ್ತು ಸರ್ಕಾರಿ ಕಚೇರಿಗಳಿಗೆ ಇಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದ್ದು, ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಲಾಗಿದೆ.

ಮುಖ್ಯಮಂತ್ರಿ ಕಚೇರಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು ಇಂದು ಶಾಲಾ-ಕಾಲೇಜು ಮತ್ತು ಸರ್ಕಾರಿ ಕಚೇರಿಗಳಿಗೆ ರಜೆ ಮತ್ತು ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ಗಿರೀಶ್ ಕಾರ್ನಾಡ್ ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾಗಿದ್ದು, ಕಾರ್ನಾಡ್ ಅವರ ಅಂತ್ಯ ಸಂಸ್ಕಾರ ಬೈಯಪ್ಪನಹಳ್ಳಿಯ ಸ್ಮಶಾನದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ. ಸರ್ಕಾರಿ ಗೌರವ ಬೇಡ ಎಂದು ಕುಟುಂಬ ಮನವಿ ಮಾಡಿದರೂ ಕೂಡ ಗೌರವ ಕೊಡುವುದು ನಮ್ಮ ಕರ್ತವ್ಯ ಎಂದು ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ.

http://karnatakanewsportal.com/girishkarnad-nidhanakke-cmkumaraswamy-santhapa/

http://karnatakanewsportal.com/hiriya-sahithi-jnanapeeta-prashasti-puraskrutha-girishkarnad-nidhana/

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ… 

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.