ಕೆ.ಎನ್.ಪಿ.ವಾರ್ತೆ,ಬಳ್ಳಾರಿ,ಜ.01;

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಜಗತ್‌ ಪ್ರಸಿದ್ಧ ಹಂಪಿ ಉತ್ಸವ ಜ.10 ಮತ್ತು 11ರಂದು ಎರಡು ದಿನ ನಡೆಯಲಿದ್ದು, ಈ ಬಾರಿಯ ಹಂಪಿ ಉತ್ಸವದ ಲಾಂಛನವನ್ನು ಇಂದು ಬಿಡುಗಡೆ ಮಾಡಲಾಯಿತು.

ಕಲ್ಲಿನ ರಥ ಮತ್ತು ವಿಜಯನಗರ ಅರಸರ ಲಾಂಛನ, ಕಾಮನಬಿಲ್ಲಿನ ಏಳು ಬಣ್ಣಗಳಿಂದ ಕೂಡಿರುವ ಈ ಲಾಂಛನವನ್ನು ಕಾರವಾರದ ಕಲಾವಿದ ದಾಮೋದರ್ ರಚಿಸಿದ್ದಾರೆ.

ಉತ್ಸವದ ಲಾಂಛನ ಬಿಡುಗಡೆ ಮಾಡಿದ ನಂತರ ಮಾತನಾಡಿದ ಶಾಸಕ ಜಿ.ಕರುಣಾಕರ ರೆಡ್ಡಿ, ಮೈಸೂರು ದಸರಾದ ಮಾದರಿಯಲ್ಲಿ ಹಂಪಿ ಉತ್ಸವವು ವಿಜೃಂಭಣೆಯಿಂದ ಜರುಗಬೇಕು.

ಉತ್ಸವಕ್ಕೆ ಬರುವ ಪ್ರವಾಸಿಗರಿಗೆ ಬೆಂಗಳೂರಿನಿಂದ ವಿಶೇಷ ವಿಮಾನದ ವ್ಯವಸ್ಥೆ ಕಲ್ಪಿಸಬೇಕು. ಉತ್ಸವದಲ್ಲಿ ಬಂದೋಬಸ್ತ್ ಗೆ ಮಹಿಳಾ ಮತ್ತು ಗಸ್ತು ಪೊಲೀಸರನ್ನು ನಿಯೋಜಿಸಬೇಕು ಎಂದು ಸಲಹೆ ನೀಡಿದರು. 

ಆತ್ಮೀಯರೇ ಕೆ.ಎನ್.ಪಿ.ಗೆ ಸಬ್ ಸ್ಕ್ರೈಬ್ ಆಗಲು ತಪ್ಪದೇ ಬೆಲ್ ಬಟನ್ ಒತ್ತಿರಿ…

ನೀವು ಕೂಡ ಬರೆಯಬಹುದು :

ಆತ್ಮೀಯರೇ, ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರ, ಕತೆ, ಕವನ, ಲೇಖನ, ಜೀವನ ಚರಿತ್ರೆ, ಚುಟುಕು, ಹೀಗೆ ಯಾವುದೇ ಪ್ರಕಾರವಾಗಲಿ ಬರೆದು, ಆಸಕ್ತರು ನಿಮ್ಮ ಬರಹವನ್ನು ಪೋಟೋ ಸಮೇತ ಕೆ.ಎನ್.ಪಿ ಗೆ ಕಳುಹಿಸಬಹುದಾಗಿದೆ.

ಈ-ವಿಳಾಸ : karnatakanewsportal@gmail.com

ಕೆ.ಎನ್.ಪಿ.ಯ ಸಾಮಾಜಿಕ ಜಾಲತಾಣಗಳ ಲಿಂಕ್ ಕೆಳಗೆ ನೀಡಲಾಗಿದೆ ಒಮ್ಮೆ ಓಪನ್ ಮಾಡಿ, ಲೈಕ್ ಮಾಡಿ, ಸಬ್ ಸ್ಕ್ರೈಬ್ ಮಾಡಿ, ಕಮೆಂಟ್ ಮತ್ತು ಶೇರ್ ಮಾಡಿರಿ.